ಬೆಳಗಾವಿ: ರಾಜ್ಯದಿಂದ ಗೋವಾಕ್ಕೆ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ವಾಹನಗಳನ್ನು ವಶಕ್ಕೆ ಪಡೆದ ಘಟನೆ ಹಿರೇಬಾಗೇವಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಗೋವಾಗೆ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ವಾಹನಗಳು ವಶಕ್ಕೆ - belgavi beef export news
ಕಿತ್ತೂರು - ಗೋವಾ ಮಾರ್ಗದಲ್ಲಿ ಗೋಮಾಂಸ ಹೊತ್ತು ನಾಲ್ಕು ವಾಹನಗಳು ಬರುತ್ತಿರುವುದನ್ನು ಖಚಿತಪಡಿಸಿಕೊಂಡ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ವಾಹನಗಳನ್ನು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಕಿತ್ತೂರು - ಗೋವಾ ಮಾರ್ಗದಲ್ಲಿ ಗೋಮಾಂಸ ಹೊತ್ತು ನಾಲ್ಕು ವಾಹನಗಳು ಬರುತ್ತಿರುವುದನ್ನು ಖಚಿತಪಡಿಸಿಕೊಂಡ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು, ವಾಹನಗಳನ್ನು ತಡೆದು ಪೊಲೀಸರಿಗೆ ಕರೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ನಾಲ್ಕು ವಾಹನ ಸಹಿತ ಚಾಲಕ, ನಿರ್ವಾಹಕರನ್ನು ವಶಕ್ಕೆ ಪಡೆದಿದ್ದಾರೆ.
ಲಾಕ್‍ಡೌನ್ ವೇಳೆ ಗೋಮಾಂಸ ಸಾಗಣೆಗೆ ಕಟ್ಟುನಿಟ್ಟಿನ ನಿಬಂಧನೆಗಳಿದ್ದರೂ ಪೊಲೀಸರ ಕಣ್ಣು ತಪ್ಪಿಸಿ ಗೋಮಾಂಸ ಸಾಗಣೆ ನಿರಂತರವಾಗಿ ನಡೆಯುತ್ತಿದೆ. ಪೊಲೀಸರು ಇನ್ನಾದರೂ ಎಚ್ಚೆತ್ತುಕೊಂಡು ಗೋಮಾಂಸ ಸಾಗಣೆ ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕಿದೆ.