ಕರ್ನಾಟಕ

karnataka

ETV Bharat / state

ಬೆಳಗಾವಿಯ ಅಧಿವೇಶನಕ್ಕೆ ಪೊಲೀಸರಿಂದ ಬಿಗಿ ಬಂದೋಬಸ್ತ್​​ - ಸುವರ್ಣ ವಿಧಾನಸೌಧ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 6 ಜನ ಎಸ್ಪಿ, 11 ಹೆಚ್ಚುವರಿ ಎಸ್ಪಿ, 43 ಡಿವೈಎಸ್ಪಿ, 95 ಸಿಪಿಐ, 241 ಪಿಎಸ್ ಐ, 298 ಎಎಸ್ಐ, 2,829 ಹೆಡ್ ಕಾನ್ ಸ್ಟೇಬಲ್, 800 ಕೆಎಸ್ ಆರ್ ಪಿ ತುಕಡಿ, 170 ಕ್ಯೂಆರ್ ಟಿ, 35 ಗರುಡಾ ತಂಡ, 130 ಎಎಸ್ ಸಿ ತಂಡ, 100 ವಾಯರ್ ಲೈಸ್ ಸಿಬ್ಬಂದಿ, 100 ಹೋಮ್ ಗಾಡ್೯ ಸೇರಿದಂತೆ ಸುಮಾರು 4931 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Police are investigating
ತನಿಖೆ ಮಾಡುತ್ತಿರುವ ಪೊಲೀಸರು​​

By

Published : Dec 17, 2022, 8:00 PM IST

ಬೆಳಗಾವಿಯ ಅಧಿವೇಶನಕ್ಕೆ ಪೊಲೀಸರಿಂದ ಬಿಗಿ ಬಂದೋಬಸ್ತ್​​

ಚಿಕ್ಕೋಡಿ: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸುಸಜ್ಜಿತವಾಗಿ ನಡೆಯುವ ಉದ್ದೇಶದಿಂದ ಸುಮಾರು 4931 ಪೊಲೀಸ್ ಸಿಬ್ಬಂದಿಗಳನ್ನು ‌ನಿಯೋಜಿಸಲಾಗಿದೆ ಎಂದು ಬೆಳಗಾವಿ ನಗರ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ 6 ಜನ ಎಸ್ಪಿ, 11 ಹೆಚ್ಚುವರಿ ಎಸ್ಪಿ, 43 ಡಿವೈಎಸ್ಪಿ, 95 ಸಿಪಿಐ, 241 ಪಿಎಸ್ ಐ, 298 ಎಎಸ್ಐ, 2829 ಹೆಡ್ ಕಾನ್ ಸ್ಟೇಬಲ್, 800 ಕೆಎಸ್ ಆರ್ ಪಿ ತುಕಡಿ, 170 ಕ್ಯೂಆರ್ ಟಿ, 35 ಗರುಡಾ ತಂಡ, 130 ಎಎಸ್ ಸಿ ತಂಡ, 100 ವಾಯರ್ ಲೈಸ್ ಸಿಬ್ಬಂದಿ, 100 ಹೋಮ್ ಗಾಡ್೯ ಸೇರಿದಂತೆ ಸುಮಾರು 4931 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹೊರ ಜಿಲ್ಲೆಯಿಂದ ಆಗಮಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಸುಸಜ್ಜಿತವಾದ ವಸತಿ ವ್ಯವಸ್ಥೆ, ಊಟೋಪಹಾರದ ಸಕಲ ಸಿದ್ಧತೆಯನ್ನು ನಗರ ಪೊಲೀಸ್ ಇಲಾಖೆ ಮಾಡಿಕೊಂಡಿದೆ. ಅಲ್ಲದೇ, ಅಗ್ನಿ ಶಾಮಕ‌ ದಳ 12, ಆಂಬ್ಯುಲೆನ್ಸ್ 16, ಗರುಡಾ ಪಡೆ 1, ಕೆಎಸ್ ಆರ್ ಟಿಸಿ 60 ಬಸ್ ವ್ಯವಸ್ಥೆ. 26 ಚೆಕ್ ಪೊಸ್ಟ್ ನಿರ್ಮಿಸಲಾಗಿದೆ.

ಇಷ್ಟೆ ಅಲ್ಲದೆ ಬೆಳಗಾವಿ ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಸುವರ್ಣ ವಿಧಾನಸೌಧದ ಸುತ್ತಲೂ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ ಎಂದು ನಗರ ಪೊಲೀಸ್ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ಪ್ರಿಯಾಂಕ್ ಈ ಮೊದಲು ಬಿಡುಗಡೆ ಮಾಡಿದ್ದ ಆಡಿಯೋಗೆ ಸ್ಪಷ್ಟನೆ ಕೊಟ್ಟಿಲ್ಲ: ಸಿಎಂ ಬೊಮ್ಮಾಯಿ

ABOUT THE AUTHOR

...view details