ಬೆಳಗಾವಿ: ಕೆಎಲ್ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ ಅಮೃತ ಮಹೋತ್ಸವ ನಿಮಿತ್ತ ಮಠಾಧೀಶರ ಬೃಹತ್ ಚಿಂತನಾ ಸಮಾವೇಶ ಹಾಗೂ ಪ್ರಭಾಕರ್ ಕೋರೆ ಅಭಿನಂದನಾ ಸಮಾರಂಭ ನಡೆಯುತ್ತಿದೆ. ಇಲ್ಲಿನ ಶಿವಬಸವ ನಗರದಲ್ಲಿರುವ ನಾಗನೂರು ರುದ್ರಾಕ್ಷಿಮಠದ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಚಿಂತನಾ ಸಮಾವೇಶ ನಡೆಯುತ್ತಿದೆ.
ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು, ಸಿರಿಗೆರೆ ತರಳಬಾಳು ಮಹಾಸಂಸ್ಥಾನ ಮಠದ ಜಗದ್ದುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಗದಗ ತೋಂಟದಾರ್ಯ ಮಠದ ಡಾ.ತೋಂಟದ ಸಿದ್ಧರಾಮ ಮಹಾ ಸ್ವಾಮೀಜಿ, ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಮಹಾ ಸ್ವಾಮೀಜಿ, ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ಜಗದ್ಗುರು ನಾಡೋಜ ಡಾ.ಅನ್ನದಾನೇಶ್ವರ ಮಹಾಸ್ವಾಮಿಗಳು, ನಿಡಸೋಸಿ ಸಿದ್ಧಸಂಸ್ಥಾನ ಮಠದ ಪಂಚಮಶಿವಲಿಂಗೇಶ್ವರ ಮಹಾಸ್ವಾಮಿಗಳು, ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳು, ಕೊಟ್ಟೂರು ಸ್ವಾಮೀಮಠದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಹೆಚ್ಚು ಮಠಾಧೀಶರು, ಕೆಎಲ್ಇ ಸಂಸ್ಥೆಯ ಅಧ್ಯಕ್ಷ, ಶಾಸಕ ಮಹಾಂತೇಶ ಕೌಜಲಗಿ, ಕಾಡಾ ಅಧ್ಯಕ್ಷ, ಮಾಜಿ ಶಾಸಕ ವಿಶ್ವನಾಥ ಪಾಟೀಲ್, ಮಾಜಿ ಎಂಎಲ್‌ಸಿ ಮಹಾಂತೇಶ ಕವಟಗಿಮಠ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.
ಇದನ್ನೂ ಓದಿ:ದಿಂಗಾಲೇಶ್ವರನನ್ನ ನಾವು ಸ್ವಾಮೀಜಿ ಅಂತಾ ಒಪ್ಪಿಲ್ಲ.. ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ..