ಕರ್ನಾಟಕ

karnataka

ETV Bharat / state

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ: ಮುತಾಲಿಕ್ - ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಬಗ್ಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್ ಪ್ರತಿಕ್ರಿಯೆ

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಗೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್

By

Published : Jun 10, 2022, 6:05 PM IST

ಬೆಳಗಾವಿ: ಪ್ರವಾದಿ ಮಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಕಾಶ್ಮೀರ ಹಿಂದೂಗಳು ಹಾಗೂ ಪಠ್ಯಪುಸ್ತಕ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥರಿಗೆ ಶ್ರೀರಾಮಸೇನೆ ‌ಸಂಪೂರ್ಣ ಬೆಂಬಲ ಸೂಚಿಸುತ್ತದೆ ಎಂದು ಪ್ರಮೋದ್ ಮುತಾಲಿಕ್ ಹೇಳಿದರು.


ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಮಹಮ್ಮದ್ ಕುರಿತು ಬಿಜೆಪಿ ನಾಯಕಿ ನೂಪುರ್ ಶರ್ಮಾ ಸತ್ಯ ಹೇಳಿದ್ದಾರೆ. ಇರೋದನ್ನೇ ಹೇಳಿದ್ದಾರೆ. ಆದ್ರೆ, ಬಿಜೆಪಿ ಅವರನ್ನು ಉಚ್ಚಾಟನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ. ಯಾರದ್ದೋ ಒತ್ತಡಕ್ಕೆ ಮಣಿದು ಬಿಜೆಪಿ ಸರ್ಕಾರ ಅಕ್ಷಮ್ಯ ಅಪರಾಧ ಎಸಗಿದೆ ಎಂದರು.

ಕಾಶ್ಮೀರ ಪಂಡಿತರ ಸರಣಿ ಹತ್ಯೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಕಾಶ್ಮೀರದಲ್ಲಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಶ್ರೀನಿವಾಸ್ ಗೌಡನಿಗೆ ಮಾನ ಮರ್ಯಾದೆ ಇದ್ದರೆ ರಿಸೈನ್​ ಮಾಡಿ ರಾಜಕಾರಣ ಮಾಡಲಿ: ಹೆಚ್​​ಡಿಕೆ ವಾಗ್ದಾಳಿ

For All Latest Updates

TAGGED:

ABOUT THE AUTHOR

...view details