ಕರ್ನಾಟಕ

karnataka

ETV Bharat / state

ಹೊಸ ವರ್ಷದ ಸಂಭ್ರಮಾಚರಣೆಗೆ ಕಡಿವಾಣ ಅಗತ್ಯ: ಗೃಹ ಸಚಿವ ಬಸವರಾಜ ಬೊಮ್ಮಾಯಿ - belagavi home minister basavaraj bommai news

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಮಾಡಲಾಗುವುದು..

home minister
ಗೃಹಸಚಿವ ಬಸವರಾಜ ಬೊಮ್ಮಾಯಿ

By

Published : Dec 5, 2020, 2:07 PM IST

Updated : Dec 5, 2020, 2:54 PM IST

ಬೆಳಗಾವಿ : ಕೊರೊನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಕಡಿವಾಣ ಹಾಕುವ ಅಗತ್ಯ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್-19 ಎರಡನೇ ಅಲೆ ಕಾರಣದಿಂದಾಗಿ ಬಹಿರಂಗವಾಗಿ ಬಹಳ ಜನ ಸೇರಿ ಹೊಸ ವರ್ಷ ಆಚರಣೆ ಮಾಡುವುದಕ್ಕೆ ಕಡಿವಾಣ ಹಾಕಲೇಬೇಕಿದೆ. ಆದರೆ, ಈ ಅವಧಿಯಲ್ಲಿ ನೈಟ್ ಕರ್ಫ್ಯೂ‌ ವಿಧಿಸುವ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ.

ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಮಾಡಲಾಗುವುದು. ಬೆಂಗಳೂರಿನ ಎಂಜಿ ರಸ್ತೆ ಅಥವಾ ಬ್ರಿಗೇಡ್ ರಸ್ತೆ ಮಾತ್ರವಲ್ಲ ರಾಜ್ಯಾದ್ಯಂತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

ಯಡಿಯೂರಪ್ಪ ಒಬ್ಬ ಹಿಟ್ಲರ್.. ಸಿಎಂ ವಿರುದ್ಧ ವಾಟಾಳ್ ನಾಗರಾಜ್ ಆಕ್ರೋಶ

ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಕೆಲವು ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್​ ಪರಿಣಾಮ ಬೀರಿಲ್ಲ. ಕೆಲವು ಕಡೆ ಒತ್ತಾಯಪೂರ್ವಕವಾಗಿ ಬಂದ್ ಮಾಡಿಸಿದವರು ಹಾಗೂ ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಸಿದವರ ಮೇಲೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದರು.

ಲವ್ ಜಿಹಾದ್ ಬಗ್ಗೆ ಮಾತನಾಡಿ, ಯುವತಿಯರಿಗೆ ಮತಾಂತರದಿಂದ ಹಿಂಸೆ ಆಗುತ್ತಿರುವ ಬಗ್ಗೆ ಬಹಳ ದೂರುಗಳಿವೆ. ಪ್ರೇಮದ ಹೆಸರಿನಲ್ಲಿ ಆಗುತ್ತಿರುವ ಶೋಷಣೆ ತಡೆಯಲು ಲವ್ ಜಿಹಾದ್ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಇದಕ್ಕಾಗಿ ಸಿದ್ಧತೆ ನಡೆಸಲಾಗುತ್ತಿದೆ ಎಂದರು. ಕಾಲೇಜುಗಳು ಸಂಪೂರ್ಣವಾಗಿ ತೆರೆದ ಮೇಲೆ ಡ್ರಗ್ಸ್ ಜಾಗೃತಿ ಅಭಿಯಾನ ವ್ಯಾಪಕವಾಗಿ ನಡೆಸಲಾಗುವುದು.

ಡ್ರಗ್ಸ್ ದಂಧೆಗೆ ಸಹಕಾರ ಅಥವಾ ಶಾಮೀಲಾದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕೆಲವರ ವಿರುದ್ಧ ಕ್ರಮ ವಹಿಸಲಾಗಿದೆ. ಹೊಸ ಹೊಸ ವಿಧಾನದಲ್ಲಿ ಡ್ರಗ್ಸ್ ಬರುತ್ತಿದೆ. ಇದನ್ನು ತಡೆಯಲು ಡಾರ್ಕ್ ನೆಟ್ ಅನ್ನು ಪೊಲೀಸರು ಬೇಧಿಸಿದ್ದಾರೆ. ಕೆಲವು ಕೊರಿಯರ್ ಮಾಲೀಕರ ಮೇಲೂ ಪ್ರಕರಣ ದಾಖಲಿಸಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಇನ್ನು ಹಿಂಡಲಗಾ ಜೈಲಿನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ರಾಜ್ಯಾತಿಥ್ಯ ನೀಡುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಈ ಸಂಬಂಧ ವರದಿ ನೀಡುವಂತೆ ಜೈಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ‌ ಎಂದರು.

Last Updated : Dec 5, 2020, 2:54 PM IST

ABOUT THE AUTHOR

...view details