ಕರ್ನಾಟಕ

karnataka

ETV Bharat / state

ಮಳೆ ಅನಾಹುತ ತಡೆಗೆ ಮುನ್ನೆಚ್ಚರಿಕೆ: ಬೆಳಗಾವಿ ಜಿಲ್ಲಾಧಿಕಾರಿ ಎಸ್​.ಬಿ.ಬೊಮ್ಮನಹಳ್ಳಿ - ಬೆಳಗಾವಿಯಲ್ಲಿ ಮಳೆ ಹಾನಿಗೆ ಮುನ್ನೆಚ್ಚರಿಕೆ ಕ್ರಮಗಳು

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆ ಆರಂಭವಾಗಿದ್ದು, ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. 2 ಎನ್​ಡಿಆರ್​ಎಫ್​, ಎಸ್​ಡಿಆರ್​ಎಫ್​ ಹಾಗೂ ಇತರ ಇಲಾಖೆ ಸಿಬ್ಬಂದಿಗಳು ತುರ್ತು ಪರಸ್ಥಿತಿಗೆ ಸಜ್ಜಾಗಿದ್ದಾರೆ ಎಂದು ಜಿಲ್ಲಾಡಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ ಹೇಳಿದರು.

ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ

By

Published : Oct 25, 2019, 9:12 AM IST

ಬೆಳಗಾವಿ: ಅಕ್ಟೋಬರ್​ 19ರಿಂದ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು, ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಎಸ್.ಬಿ ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಎನ್​ಡಿಆರ್​ಎಫ್ ತಂಡ, ಒಂದು ಎಸ್​ಡಿಆರ್​ಎಫ್ ತಂಡ ಹಾಗೂ ಅಗ್ನಿಶಾಮಕ ದಳ, ಪೊಲೀಸ್​ ಸಿಬ್ಬಂದಿ ಜತೆ ಸಜ್ಜಾಗಿದ್ದೇವೆ. ಮಲಪ್ರಭಾ, ಕೃಷ್ಣಾ ನದಿಗಳು ತುಂಬಿ ಹರಿಯುತ್ತಿದ್ದು, ಸದ್ಯ ನದಿಗಳ ಒಳ ಹರಿವು ಕಡಿಮೆಯಾಗಿದೆ. ರಾಮದುರ್ಗ, ಬೈಲಹೊಂಗಲ ತಾಲೂಕಿನ ಹಲವು ಗ್ರಾಮಗಳು ಜಲಾವೃತವಾಗಿದೆ. ಅಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸರ್ಕಾರ ಕೇಂದ್ರಗಳನ್ನು ಪ್ರಾರಂಭಿಸಿದೆ ಎಂದರು.

ಗೋಕಾಕ ಬಂಡೆ ತೆರವುಗೊಳಿಸುವ ಕೆಲಸ ನಡೆಯುತ್ತಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಇನ್ನಿತರ ಇಲಾಖೆಯ ಅಧಿಕಾರಿಗಳಿಂದ ಬಂಡೆ ತೆರವು ಕಾರ್ಯ ಕೈಗೊಂಡಿದ್ದಾರೆ. ಗುಡ್ಡದ ಕೆಳಗೆ ವಾಸವಾಗಿರುವ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು.

ABOUT THE AUTHOR

...view details