ಬೆಳಗಾವಿ: ಇಂದು ಸಂಜೆ ನಡೆಯುವ ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಗೆ ಕುಂದಾನಗರಿ ಭರ್ಜರಿಯಾಗಿ ಸಿದ್ಧಗೊಳ್ಳುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಕಾರ್ಯಕಾರಿಣಿಗೆ ಮಾಡಿಕೊಂಡ ಸಿದ್ಧತೆ ಕುರಿತು ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಭೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ನಾಯಕರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ರೀತಿಯಿಂದಲೂ ಪ್ರಯತ್ನಿಸಲಾಗುತ್ತಿದೆ ಎಂದರು.