ಕರ್ನಾಟಕ

karnataka

ETV Bharat / state

ಯೋಧನ ಪಾರ್ಥಿವ ಶರೀರದ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ: ಲಕ್ಷ್ಮಿ ಹೆಬ್ಬಾಳ್ಕರ್ - ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಬೆಳಗಾವಿ ತಾಲ್ಲೂಕಿನ ಯೋಧನ ಪಾರ್ಥಿವ ಶರೀರ ನಾಳೆ ಸಂಜೆ ಸ್ವಗ್ರಾಮಕ್ಕೆ ಬರಲಿದ್ದು,‌ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

By

Published : Nov 8, 2019, 7:05 PM IST

ಬೆಳಗಾವಿ:ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮನಾದ ಯೋಧನ ಪಾರ್ಥಿವ ಶರೀರ ನಾಳೆ ಸಂಜೆ ಸ್ವಗ್ರಾಮಕ್ಕೆ ಬರಲಿದ್ದು,‌ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಉಚಗಾಂವ ಗ್ರಾಮದ ರಾಹುಲ್ ಸುಳಗೇಕರ ಉಗ್ರರೊಂದಿಗೆ ಹೋರಾಡಿ ವೀರಮರಣ‌ ಹೊಂದಿದ್ದಾರೆ. ಗ್ರಾಮದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಸರ್ಕಾರದ ಎಲ್ಲ ಸೌಲಭ್ಯಗಳನ್ನು ಯೋಧನ ಕುಟುಂಬಕ್ಕೆ ದೊರಕಿಸಿಕೊಡಲಾಗುವುದು ಎಂದು ಶಾಸಕಿ ಭರವಸೆ ನೀಡಿದರು.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಮಹಾರಾಷ್ಟ್ರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನನ್ನ ಕ್ಷೇತ್ರದ ಐವರು ದುರ್ಮರಣ ಹೊಂದಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಸೊಲ್ಲಾಪುರ ಶಾಸಕಿ ಪ್ರಣಿತಿ ಶಿಂಧೆ, ಎಂಎಲ್​ಸಿ ಭಂಟಿ ಪಾಟೀಲ ಜತೆಗೆ ಮಾತನಾಡಿದ್ದೇನೆ. ಘಟನೆ ಕುರಿತು ಮಾಹಿತಿ ಪಡೆದು, ಸಹಕಾರ ನೀಡುವಂತೆ ಕೋರಿದ್ದೇನೆ. ಘಟನೆಯಲ್ಲಿ 7 ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ.ಮಹಾರಾಷ್ಟ್ರದ ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಹೋಗಿ ಸಹಕಾರ ನೀಡುತ್ತಿದ್ದಾರೆ ಎಂದರು.

ಮಾಜಿ ಸಚಿವ ಡಿಕೆಶಿ ಅವರಿಗೆ ಬೇಲ್ ಸಿಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ, ಪೂಜೆ ಜತೆಗೆ ಹರಕೆ ಹೊತ್ತುಕೊಂಡಿದ್ದರು.ಈ ಕಾರಣಕ್ಕೆ ಡಿ.ಕೆ. ಶಿವಕುಮಾರ್ ಎಲ್ಲ ಕಡೆಯೂ ಭೇಟಿ ನೀಡುತ್ತಿದ್ದಾರೆ. ಅವರ ಬಿಡುಗಡೆಯಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಬಂದಿದೆ ಎಂದರು.

ಉಪಚುನಾವಣೆಯಲ್ಲಿ ನನಗೆ ಅಥಣಿ ಕ್ಷೇತ್ರದ ‌ವೀಕ್ಷಕಿ ಜೊತೆಗೆ ಉಸ್ತುವಾರಿಯ ಜವಾಬ್ದಾರಿಯನ್ನು ಪಕ್ಷ ವಹಿಸಿದೆ. ಅಥಣಿ ಕ್ಷೇತ್ರದಲ್ಲಿ ಸಂಚರಿಸಿ ನನ್ನ ರೋಲ್ ಪ್ಲೇ ಮಾಡುತ್ತೇನೆ ಎಂದರು.

ABOUT THE AUTHOR

...view details