ಬೆಳಗಾವಿ: ಎ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ.
ಕಡ್ಡಾಯ ವರ್ಗಾವಣೆಗೆ ವಿರೋಧ: ಶಿಕ್ಷಕರ ಉಪವಾಸ ಸತ್ಯಾಗ್ರಹ - ಬೆಳಗಾವಿ
ಸತತ ಹತ್ತು ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಡ್ಡಾಯ ವರ್ಗಾವಣೆ ವಿರೋಧಿಸಿ ಶಿಕ್ಷಕರ ಉಪವಾಸ ಸತ್ಯಾಗ್ರಹ
ನಗರದ ಜಿಲ್ಲಾ ಶಿಕ್ಷಣಾಧಿಕಾರಿ ಕಚೇರಿ ಮುಂದೆ ನೆರೆದ ನೂರಾರು ಶಿಕ್ಷಕ, ಶಿಕ್ಷಕಿಯರು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸತತ ಹತ್ತು ವರ್ಷಗಳಿಂದ ಎ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿರುವುದು ಅವೈಜ್ಞಾನಿಕ ಮತ್ತು ಅಮಾನವೀಯವಾಗಿದೆ ಎಂದು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.
ಎ ವಲಯದಲ್ಲಿ ನೌಕರಿ ಮಾಡಬೇಕೆಂದರೆ ತುಂಬಾ ಕಷ್ಟ ಅನುಭವಿಸಬೇಕು. ಇಷ್ಟಾದರೂ ನಮ್ಮನ್ನು ವರ್ಗಾವಣೆ ಮಾಡುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
Last Updated : Jul 23, 2019, 8:14 PM IST