ಬೆಳಗಾವಿ: ಇಲ್ಲಿನ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಳೆದ 3 ತಿಂಗಳ ಹಿಂದೆ ಪೋಕ್ಸೋ ಪ್ರಕರಣದಲ್ಲಿ ಈತನನ್ನು ಬಂಧಿಸಲಾಗಿತ್ತು.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾಗಿರುವ ಕೈದಿ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕಳೆದ ಮೂರು ತಿಂಗಳಿಂದಲೂ ಆರೋಪಿ ಹಿಂಡಲಗಾ ಜೈಲಿನಲ್ಲಿದ್ದನು.