ಕರ್ನಾಟಕ

karnataka

ETV Bharat / state

ಕುಖ್ಯಾತ ರೌಡಿಯ ಹಂತಕ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಅನುಮಾನಾಸ್ಪದ ಸಾವು! - Murder Accused Death In Hindalaga Jail

ಹಿಂಡಲಗಾ ಜೈಲಿನಲ್ಲಿ ಕೊಲೆ ಆರೋಪಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಗುರುರಾಜ್ ಸಾವಿಗೆ ಹಿಂಡಲಗಾ ಜೈಲು ಸಿಬ್ಬಂದಿಯೇ ಕಾರಣ ಎಂದು ಮೃತನ ಸಹೋದರ ಕಿರಣ್ ಆರೋಪಿಸಿದ್ದಾನೆ.

Prisoner Dies at Hindalaga Jail in Belagavi
Prisoner Dies at Hindalaga Jail in Belagavi

By

Published : Feb 5, 2022, 2:02 PM IST

ಬೆಳಗಾವಿ:ಕೇರಳದ ಕುಖ್ಯಾತ ರೌಡಿ ತಸ್ಲಿಮ್ ಕೊಲೆ ಪ್ರಕರಣದ ಆರೋಪಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಗುರುರಾಜ್ ದೊಡ್ಡಮನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಕೈದಿ.

ಕಳೆದ ನಾಲ್ಕು ದಿನಗಳಿಂದ ಎದೆ ನೋವಿನಿಂದ ಬಳಲುತ್ತಿರುವುದಾಗಿ ಸಂಬಂಧಿಗೆ ಹೇಳಿಕೊಂಡಿದ್ದ ಆರೋಪಿ ಗುರುರಾಜ್ ನಿನ್ನೆ ರಾತ್ರಿ ಮೃತನಾಗಿದ್ದಾನೆ. ಎದೆ ನೋವು ಕಾಣಿಸಿಕೊಂಡಿದೆ, ಐದನೂರು ರೂಪಾಯಿ ನೀಡುವಂತೆ ಗುರುರಾಜ್ ಸಂಬಂಧಿಗೆ ಕೇಳಿದ್ದನು. ಇದಾದ ಕೆಲವೇ ಗಂಟೆಗಳಲ್ಲಿ ಆತ ಮೃತಪಟ್ಟಿದ್ದಾನೆ.

ಸಾವಿನ ಸುದ್ದಿಯನ್ನು ಜೈಲು ಸಿಬ್ಬಂದಿ ಗುರುರಾಜ್ ಕುಟುಂಬಸ್ಥರಿಗೆ ತಿಳಿಸಿದ್ದಾರೆ. ಹದಿನೈದು ದಿನಗಳ ಹಿಂದೆ ಆರೋಪಿ ಗುರುರಾಜ್ ಮೇಲೆ ಜೈಲು ಸಿಬ್ಬಂದಿ ಹಲ್ಲೆ ನಡೆಸಿದ್ದ. ಇದಾದ ಬಳಿಕ ಆತನಿಗೆ ಎದೆ ನೋವು ಆರಂಭವಾಗಿದೆ.

ಇದನ್ನೂ ಓದಿ: ಹಿಜಾಬ್ ಹೆಸರಿನಲ್ಲಿ ನಮ್ಮ ಪ್ರದೇಶವನ್ನು ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ: ಕಟೀಲ್​ ಕಿಡಿ

ಗುರುರಾಜ್ ಸಾವಿಗೆ ಹಿಂಡಲಗಾ ಜೈಲು ಸಿಬ್ಬಂದಿಯೇ ಕಾರಣ ಎಂದು ಮೃತನ ಸಹೋದರ ಕಿರಣ್ ಆರೋಪಿಸಿದ್ದಾನೆ. ಅಲ್ಲದೇ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜೈಲು ಸಿಬ್ಬಂದಿ ವಿರುದ್ಧ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. 2019ರಲ್ಲಿ ಕೊಲೆ ಪ್ರಕರಣದಲ್ಲಿ ಗುರುರಾಜ್ ಹಿಂಡಲಗಾ ಜೈಲು ಸೇರಿದ್ದರು.

ABOUT THE AUTHOR

...view details