ಚಿಕ್ಕೋಡಿ :ಟೋಲ್ ಗೇಟ್ ಬಂದ್ ಮಾಡಲು ರಸ್ತೆ ಅಡ್ಡಗಟ್ಟಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಟೋಲ್ ಗೇಟ್ ಬಂದ್ ಮಾಡುವಂತೆ ಆಗ್ರಹಿಸಿ ರೈತ ಪರ ಸಂಘಟನೆಗಳ ಪ್ರತಿಭಟನೆ - ಚಿಕ್ಕೋಡಿ ರೈತರ ಪ್ರತಿಭಟನೆ ಸುದ್ದಿ
ಟೋಲ್ ಗೇಟ್ ಬಂದ್ ಮಾಡುವಂತೆ ಒತ್ತಾಯಿಸಿ, ಟೋಲ್ ಗೇಟ್ ಹತ್ತಿರ ರಸ್ತೆ ಅಡ್ಡಗಟ್ಟಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪ್ರತಿಭಟನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಬ್ಬುರ್ ಹತ್ತಿರ ನಿಪ್ಪಾಣಿ ಮಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿರುವ ಟೋಲ್ ಗೇಟ್ ಬಂದ್ ಮಾಡುವಂತೆ ಆಗ್ರಹಿಸಿ ನೂರಾರು ರೈತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದಾರೆ.
ಇನ್ನು ಅವೈಜ್ಞಾನಿಕ ಟೋಲ್ ಸಂಗ್ರಹ ಹಾಗೂ ನಲವತ್ತು ಕಿಲೋಮೀಟರ್ ಅಂತರದಲ್ಲೇ ಎರಡು ಟೋಲ್ ಗೇಟ್ ನಿರ್ಮಾಣ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ 50 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
Last Updated : Nov 5, 2019, 2:43 PM IST