ಬೆಳಗಾವಿ:ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಐತಿಹಾಸಿಕ ಮಹಾಪುರುಷರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರೋ ಹಿನ್ನೆಲೆ ಪೀರನವಾಡಿಯಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಸಂಗೊಳ್ಳಿ ರಾಯಣ್ಣ ಮತ್ತು ಶಿವಾಜಿ ಮೂರ್ತಿಗೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಪೀರನವಾಡಿಯ ರಾಯಣ್ಣ,ಶಿವಾಜಿ ಮೂರ್ತಿಗೆ ಪೊಲೀಸ್ ಭದ್ರತೆ - ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ
ಕಳೆದ ಕೆಲವು ದಿನಗಳಿಂದ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದ ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರೋ ಕಾರಣ ವಿವಾದ ಸೃಷ್ಟಿಯಾಗಿತ್ತು.
ಬಿಗಿ ಪೊಲೀಸ್ ಭದ್ರತೆ
ಹೀಗಾಗಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪೀರನವಾಡಿಯಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಶಿವಾಜಿ ಮೂರ್ತಿಗೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ. ಇಬ್ಬರು ಪಿಎಸ್ಐ, ಎರಡು ಕೆಎಸ್ಆರ್ಪಿ ತುಕಡಿ, ಒಂದು ಡಿಆರ್ ತುಕಡಿ ಸೇರಿದಂತೆ ನೂರಾರು ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಅವಹೇಳಕಾರಿ ಪೋಸ್ಟ್‌ಗೆ ಸಂಬಂಧಿಸಿದಂತೆ ಖಡೇಬಜಾರ್, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಿಚ್ಚು ಹೊತ್ತಿಸುವ ಪೋಸ್ಟ್ ಹಾಕಿದವರನ್ನು ಬಂಧಿಸಲು ಪೊಲೀಸರು ಜಾಲ ಬೀಸಿದ್ದಾರೆ.