ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಪ್ರಮಾಣದ ಮಳೆಯಿಂದ ಚಿಕ್ಕೋಡಿ, ಅಥಣಿ, ರಾಯಬಾಗ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕಿನ 81 ಗ್ರಾಮಗಳು ಪ್ರವಾಹಕ್ಕೆ ತತ್ತರಿಸಿವೆ. ಈ ಭಾಗದ ರೈತರ ಸಾಲಮನ್ನಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ನ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿದರು.
ಕೃಷ್ಣಾ ನದಿ ಪಾತ್ರದ ಸಂತ್ರಸ್ತ ರೈತರ ಸಾಲಮನ್ನಾಗೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ಪಾತ್ರದ ಜನರು ಮಳೆಗೆ ಸಂಪೂರ್ಣ ನೆಲೆ ಕಳೆದುಕೊಂಡಿದ್ದು, ಅಲ್ಲಿನ ರೈತರ ಸಾಲ ಮನ್ನಾ ಹಾಗೂ ಪರಿಹಾರ ಹಣ ಹೆಚ್ಚಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ಮೂಲಕ ಆಗ್ರಹಿಸಿದರು.
ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಪಟ್ಟಣದ ಇಂದಿರಾ ನಗರದಿಂದ ಬಸವೇಶ್ವರ ವೃತ್ತದವರೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ರಾಜ್ಯ ಸರ್ಕಾರ ನೀಡಿದ ₹ 10 ಸಾವಿರ ಪರಿಹಾರದ ಚೆಕ್ ಯಾವುದಕ್ಕೂ ಸಾಕಾಗುವುದಿಲ್ಲ. ಕೆಲವು ಚೆಕ್ ಬೌನ್ಸ್ ಆಗುತ್ತಿವೆ ಎಂದು ದೂರಿದ್ದಾರೆ. ಸಾಲಮನ್ನಾ ಹಾಗೂ ಪುನರ್ವಸತಿ ನೀಡಬೇಕು ಎಂದು ಒತ್ತಾಯಿಸಿದರು.
Last Updated : Sep 13, 2019, 8:21 AM IST