ಕರ್ನಾಟಕ

karnataka

ETV Bharat / state

ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್​ಗೆ ಹಾನಿ: ಅಥಣಿ ಪೊಲೀಸರಿಂದ ಪರಿಸ್ಥಿತಿ ತಿಳಿ - ಡಾ. ಅಂಬೇಡ್ಕರ್ ಬ್ಯಾನರ್​ಗೆ ಹಾನಿ ಖಂಡಿಸಿ ಪ್ರತಿಭಟನೆ

ಅಥಣಿ ತಾಲೂಕಿನ ಕಿರಣಗಿ ಗ್ರಾಮದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್​​ಗೆ ತಡರಾತ್ರಿ ಕಿಡಿಗೇಡಿಗಳು ಹಾನಿ ಮಾಡಿದ್ದು, ದಲಿತ ಸಮುದಾಯ ಆಕ್ರೋಶ ವ್ಯಕ್ತಪಡಿಸುತ್ತಿದೆ. ಮುಂಜಾಗೃತಾ ಕ್ರಮವಾಗಿ ಅಥಣಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ವಾತಾವರಣ ತಿಳಿಗೊಳಿಸಿದ್ದಾರೆ.

Athani
ಅಥಣಿ

By

Published : Oct 28, 2020, 12:51 PM IST

ಅಥಣಿ: ತಾಲೂಕಿನ ಕಿರಣಗಿ ಗ್ರಾಮದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರವಿರುವ ಬ್ಯಾನರ್​​ಗೆ ತಡರಾತ್ರಿ ಕಿಡಿಗೇಡಿಗಳು ಹಾನಿ ಮಾಡಿದ್ದು, ದಲಿತ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರನ್ನು ಬಂಧಿಸುವಂತೆ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಅಂಬೇಡ್ಕರ್‌ ಬ್ಯಾನರ್‌ಗೆ ಹಾನಿ ವಿರೋಧಿಸಿ ಅಥಣಿಯಲ್ಲಿ ಆಕ್ರೋಶ
ಕಳೆದ ಕೆಲ ದಿನಗಳ ಹಿಂದೆ ಗ್ರಾಮದ ರಸ್ತೆಯ ಬದಿಯಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಮಹಾನಾಯಕ್' ಧಾರಾವಾಹಿಯ ಬ್ಯಾನರ್ ಹಾಕಲಾಗಿತ್ತು. ರಾತ್ರಿ ವೇಳೆಯಲ್ಲಿ ಕೆಲವು ಕಿಡಿಗೇಡಿಗಳು ಬ್ಯಾನರ್​​​ಗೆ ಕಲ್ಲೆಸೆದು ಹಾನಿ ಮಾಡುವುದರಿಂದ, ದಲಿತ ಸಮುದಾಯ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಕೋಮು ಗಲಭೆ ನಡೆಯದಂತೆ ಹಾಗೂ ಮುಂಜಾಗ್ರತಾ ಕ್ರಮವಾಗಿ 20ಕ್ಕೂ ಹೆಚ್ಚು ಅಥಣಿ ಪೊಲೀಸರು ಸ್ಥಳದಲ್ಲಿ ಜಮಾಯಿಸಿ ಸೂಕ್ತ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಪೊಲೀಸರ ಭರವಸೆಯಿಂದಾಗಿ ದಲಿತ ಸಮುದಾಯದ ಮುಖಂಡರು ಪ್ರತಿಭಟನೆಯನ್ನು ಕೈ ಬಿಟ್ಟಿದ್ದಾರೆ.

For All Latest Updates

ABOUT THE AUTHOR

...view details