ಬೆಳಗಾವಿ: ಸರ್ಕಾರದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ರೀತಿ ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿದ ಕರವೇ ಕಾರ್ಯಕರ್ತರು, ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದ್ದಾರೆ.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಆಕ್ರೋಶ - Protest against formation of the Maratha Development Authority at Belgavi
ಸಿಎಂ ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು ಎಂದು ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಎಚ್ಚರಿಸಿದ್ದಾರೆ.
![ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಆಕ್ರೋಶ protest-against-formation-of-the-maratha-development-authority-at-belgavi](https://etvbharatimages.akamaized.net/etvbharat/prod-images/768-512-9569516-553-9569516-1605610134603.jpg)
ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಆಕ್ರೋಶ...
ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ
ಈ ಕುರಿತು ಮಾತನಾಡಿದ ಕರವೇ ಕಾರ್ಯಕರ್ತೆ ಕಸ್ತೂರಿ ಬಾಯಿ, ಸಿಎಂ ಯಡಿಯೂರಪ್ಪ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡಿದ್ದಾರೆ. ಹೀಗಾಗಿ ಈ ಕೂಡಲೇ ಆದೇಶವನ್ನು ಹಿಂಪಡೆಯಬೇಕು. ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಪ್ರಾಧಿಕಾರಕ್ಕೆ ಮೀಸಲಿಟ್ಟ 50 ಕೋಟಿ ರೂ. ಆದೇಶ ಹಿಂಪಡೆಯಬೇಕು. ಒಂದು ವೇಳೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ವಾಪಸ್ ಪಡೆಯದಿದ್ರೆ ಸಿಎಂ ಯಡಿಯೂರಪ್ಪನವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.
Last Updated : Nov 17, 2020, 5:33 PM IST