ಬೆಳಗಾವಿ: ಮನಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಪ್ರತಿಮೆಯ ಕುರಿತು ನಡೆದ ಘಟನೆಯ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳದೆ, ಕರ್ನಾಟಕ ಸರ್ಕಾರದ ವಿರುದ್ಧ ಟ್ವೀಟ್ ಮಾಡಿದ್ದಾರೆಂದು ಆರೋಪಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿರುವ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸರ್ಕಾರದ ವಿರುದ್ಧ ಟ್ವೀಟ್: ಖಾನಾಪುರ ಶಾಸಕಿ ವಿರುದ್ಧ ಕರವೇ ಪ್ರತಿಭಟನೆ - belagavi
ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕರವೇ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿಯ ಕನ್ನಡ ಸಾಹಿತ್ಯ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕಾರ್ಯಕರ್ತರು ಶಾಸಕಿ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿದರು.
ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ಶಾಸಕಿ ಅಂಜಲಿ ನಿಂಬಾಳ್ಕರ್ ಸರ್ಕಾರದ ಪ್ರತಿನಿಧಿಯಾಗಿ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಉಂಡ ಮನೆಗೆ ದ್ರೋಹ ಬಗೆದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.