ಕರ್ನಾಟಕ

karnataka

ETV Bharat / state

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ, ಗ್ರಾ.ಪಂ ಸದಸ್ಯರ ಪ್ರತಿಭಟನೆ - ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗ್ರಾಮ ಪಂಚಾಯತಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

By

Published : Aug 26, 2022, 7:19 PM IST

Updated : Aug 26, 2022, 7:41 PM IST

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ, ಕಾನೂನು, ಶಿಷ್ಟಾಚಾರ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ನಗರದ ಡಿಸಿ ಕಚೇರಿಯಲ್ಲಿ ನಿಲಜಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಲಕ್ಷ್ಮೀ ಹೆಬ್ಬಾಳ್ಕರ್ ಮತಕ್ಷೇತ್ರದ ವ್ಯಾಪ್ತಿಯಲ್ಲಿರುವ ನಿಲಜಿ ಗ್ರಾಮ ಪಂಚಾಯತಿ ಶಿಂಧೋಳ್ಳಿ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಹೆಬ್ಬಾಳ್ಕರ್ ‌ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಆ.25ರಂದು ಚಾಲನೆ ನೀಡಿದ್ದಾರೆ. ಇದು ಕಾನೂನು ಬಾಹಿರ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ, ಗ್ರಾ.ಪಂ ಸದಸ್ಯರ ಪ್ರತಿಭಟನೆ

ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಬೇಕಾದರೆ ಮೊದಲಿಗೆ ಟೆಂಡರ್ ಕರೆಯಬೇಕು. ಅದಕ್ಕೆ ಅನುಮೋದನೆ ಸಿಗಬೇಕು. ಆದ್ರೆ, ಇದ್ಯಾವುದನ್ನೂ ಪಾಲಿಸದೇ ವರ್ಕ್ ಆರ್ಡರ್ ಇಲ್ಲದೇ ಇದ್ದರೂ ಶಾಸಕಿ ಪುತ್ರನಿಂದ ಅಭಿವೃದ್ಧಿ ‌ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇದಲ್ಲದೆ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರ ಗಮನಕ್ಕೆ ತರದೇ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಸಿಗೆ ಒತ್ತಾಯಿಸಿದರು.

ಇದನ್ನೂ ಓದಿ:ಕಾಂಗ್ರೆಸ್ ಕುಮ್ಮಕ್ಕಿನಿಂದ ಕೆಂಪಣ್ಣ ಅವರಿಂದ ಕಮಿಷನ್ ಆರೋಪ: ಕಾರಜೋಳ

Last Updated : Aug 26, 2022, 7:41 PM IST

ABOUT THE AUTHOR

...view details