ಬೆಳಗಾವಿ:ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಸತ್ಯಾಗ್ರಹ ಕೈಗೊಂಡಿದ್ದಾರೆ.
ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರ ಸತ್ಯಾಗ್ರಹ - ಲೆಟೆಸ್ಟ್ ಬೆಳಗಾವಿ ನ್ಯೂಸ್
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಗ್ರ ಕರ್ನಾಟಕ ರಾಜ್ಯ ವಿಕಲಚೇತನ ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು, ಗ್ರಾಮೀಣ ಪುನರ್ವಸತಿ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಇವರಿಗೆ ಅಂಗಾಂಗ ವೈಫಲ್ಯವಿದೆ. ಹಾಗಂತ ಇವರೇನು ಸುಮ್ಮನೆ ಮನೆಯಲ್ಲಿ ಕುಳಿತು ಜೀವನ ಸಾಗಿಸುವವರಲ್ಲ. ಅಂಗವೈಕಲ್ಯ ಮೆಟ್ಟಿ ನಿಂತು ಸರ್ಕಾರ ಹಾಗೂ ಸಮಾಜದ ಸೇವೆ ನಡೆಸುತ್ತಿರುವವರು. ಆದ್ರೆ ಇವರ ಕಷ್ಟಕ್ಕೆ ಸ್ಪಂದಿಸಬೇಕಾದ ಸರ್ಕಾರ ಮಾತ್ರ ತನಗೆ ಏನೂ ಗೊತ್ತಿಲ್ಲವೆಂಬಂತೆ ಕುಳಿತಿದೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಹಲವು ವರ್ಷಗಳಿಂದ ಗ್ರಾಮ, ನಗರ ಮತ್ತು ತಾಲೂಕು ಪಂಚಾಯತ್ನ ವಿವಿದೊದ್ದೇಶ ಯೋಜನೆಯ ಪುನರ್ವಸತಿ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವವರ ತಮ್ಮ ಬೇಡಿಕೆ ಮಾತ್ರ ಈಡೇರಿಲ್ಲವೆಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದ್ದಾರೆ.
ಸುಮಾರು ಹತ್ತು ವರ್ಷಗಳಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪುನರ್ವಸತಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಪ್ರದೇಶದವರಿಗೆ ಮೂರು ಸಾವಿರ ಹಾಗೂ ನಗರ ಪ್ರದೇಶದವರಿಗೆ ಆರು ಸಾವಿರ ಸಹಾಯಧನ ನೀಡುತ್ತಿದೆ. ಸರ್ಕಾರ ನೀಡುವ ಈ ಅಲ್ಪ ಸಹಾಯಧನದಿಂದ ನಮ್ಮ ಜೀವನ ನಡೆಸಲು ತುಂಬಾ ಕಷ್ಟವಾಗುತ್ತದೆ ಎಂಬುದು ಇವರ ವಾದ. ಆದರೆ ಪುನರ್ವಸತಿ ಕಾರ್ಯಕರ್ತರಿಂದ ಹೆಚ್ಚು ಕೆಲಸ ಮಾಡಿಸಿಕೊಳ್ಳುತ್ತಾರೆಂಬ ಅಪವಾದವೂ ಇದೆ. ಇಷ್ಟೆಲ್ಲ ಕಷ್ಟ ಎದುರಿಸಿ ಸಮಾಜದಲ್ಲಿ ಗೌರಯುತವಾಗಿ ಬದುಕುವ ಹಂಬಲ ಹೊಂದಿರುವ ವಿಕಲಚೇತನ ಕಾರ್ಯರ್ತರಿಗೆ ಸರ್ಕಾರದಿಂದ ಹೆಚ್ಚಿನ ರೂಪದಲ್ಲಿ ಸಹಾಯಧನದ ಅವಶ್ಯಕತೆ ಇದೆ.