ಕರ್ನಾಟಕ

karnataka

ETV Bharat / state

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ - ಅಂಗನವಾಡಿ ಕಾರ್ಯಕರ್ತೆ

ಅಂಗನವಾಡಿ ನೌಕರರಿಗೆ ನಿಗದಿತ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸುವಂತೆ ಕೋರಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಲಾಯಿತು.

Protest
ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

By

Published : Aug 11, 2020, 2:48 PM IST

ಬೆಳಗಾವಿ:ಅಂಗನವಾಡಿ ನೌಕರರಿಗೆ ಹಾರ, ತುರಾಯಿಗಳೊಂದಿಗೆ ಸನ್ಮಾನ ಮಾಡುವ ಬದಲು ಸರಿಯಾದ ವೇತನ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.

ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತೆಯರು, ಕೊರೊನಾ ಸಂದರ್ಭದಲ್ಲಿ ನಾವು ಎಡೆಬಿಡದೇ ಕೆಲಸ ಮಾಡುತ್ತಿದ್ದೇವೆ. ನಮ್ಮ ಕೆಲಸ ಗುರುತಿಸಿ ಹಾರ, ತುರಾಯಿ, ಸನ್ಮಾನದ ಮೂಲಕ ಮಾತ್ರ ಗೌರವಿಸಲಾಗುತ್ತಿದೆಯೇ ಹೊರತು ವೇತನ, ಸೌಲಭ್ಯ ನೀಡುತ್ತಿಲ್ಲ. ಕಡಿಮೆ ವೇತನ, ಹೆಚ್ಚು ಕೆಲಸ ಇವುಗಳಿಂದ ಅಂಗನವಾಡಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಂಗನವಾಡಿ ನೌಕರರನ್ನು ಖಾಯಂ ಮಾಡುವುದರ ಜೊತೆಗೆ, ಸರಿಯಾದ ವೇತನ ನೀಡಬೇಕು. ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 18,000 ಕನಿಷ್ಠ ವೇತನ ಜಾರಿಗೊಳಿಸಬೇಕು. ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರನ್ನು ಸಿ ಮತ್ತು ಡಿ ದರ್ಜೆಯ ನೌಕರರನ್ನಾಗಿ ಮಾಡಬೇಕು. ಸಂಬಳ ಸಹಿತ ವೈದ್ಯಕೀಯ ರಜೆ ಸೌಲಭ್ಯ ಸೇರಿದಂತೆ ‌ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details