ಕರ್ನಾಟಕ

karnataka

ETV Bharat / state

ಸದಾಶಿವ ಆಯೋಗದ ವರದಿ ಕೈಬಿಡುವಂತೆ ಆಗ್ರಹಿಸಿ ಪತ್ರ ಚಳುವಳಿ

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ದೃಷ್ಟಿಯಿಂದ ಹಿಂದುಳಿದವರ ಪಟ್ಟಿಯಲ್ಲಿರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಮೀಸಲಾತಿಯಿಂದ ಹೊರಗಿಡುವ ಮೂಲಕ ವಂಚಿಸಬಾರದು ಎಂದು ಬಂಜಾರ ಸಮುದಾಯದ ಮುಖಂಡರು ಹಾಗೂ‌ ತಾಂಡಾ ರಕ್ಷಣಾ ವೇದಿಕೆ ವತಿಯಿಂದ ಪತ್ರಚಳುವಳಿ ನಡೆಸುವ ಮೂಲಕ ಪ್ರತಿಭಟನೆ ನಡೆಸಲಾಯಿತು.

protest
protest

By

Published : Jun 10, 2020, 3:19 PM IST

Updated : Jun 10, 2020, 3:42 PM IST

ಬೆಳಗಾವಿ: ಸದಾಶಿವ ಆಯೋಗದ ವರದಿ ಕೈಬಿಡಬೇಕು ಎಂದು ಒತ್ತಾಯಿಸಿ ಬಂಜಾರ ಸಮುದಾಯದ ಮುಖಂಡರು ಹಾಗೂ‌ ತಾಂಡಾ ರಕ್ಷಣಾ ವೇದಿಕೆ ವತಿಯಿಂದ ಪತ್ರ ಚಳುವಳಿ ಮೂಲಕ ಪ್ರತಿಭಟನೆ ನಡೆಸಲಾಯಿತು.

ವರದಿ ಕೈಬಿಡುವಂತೆ ಆಗ್ರಹಿಸಿ ಪತ್ರ ಚಳುವಳಿ

ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಸಂಘದ ಪದಾಧಿಕಾರಿಗಳು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ದೃಷ್ಟಿಯಿಂದ ಹಿಂದುಳಿದವರ ಪಟ್ಟಿಯಲ್ಲಿರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಮೀಸಲಾತಿಯಿಂದ ಹೊರಗಿಡುವ ಮೂಲಕ ವಂಚಿಸಬಾರದು ಎಂದು ಆಗ್ರಹಿಸಿದರು.

ಪತ್ರ ಚಳುವಳಿ

ರಾಜ್ಯದ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಸದ್ಯ ಎಸ್​ಸಿ/ಎಸ್​ಟಿ ವರ್ಗದಲ್ಲಿ ಮೀಸಲಾತಿ ನೀಡಲಾಗಿದೆ. ಆದರೆ ಸದಾಶಿವ ಆಯೋಗದ ವರದಿಯಲ್ಲಿ ಹಲವು ಸಮುದಾಯಗಳಿಗೆ ಮೀಸಲಾತಿ ಬೇಡ ಎಂದು ಹೇಳಲಾಗಿದೆ. ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳನ್ನು ಮೀಸಲಾತಿಯಿಂದ ವಂಚಿಸಬಾರದು. ತಪ್ಪು ಮಾಹಿತಿಯಿಂದ ಸಮುದಾಯಕ್ಕೆ ಮೀಸಲಾತಿ ತಪ್ಪಿಸಲು ಹೊರಟಿರುವ ಸದಾಶಿವ ಆಯೋಗದ ವರದಿ ಕೈ ಬಿಡಬೇಕು ಎಂದು ಒತ್ತಾಯಿಸಿದರು.

Last Updated : Jun 10, 2020, 3:42 PM IST

ABOUT THE AUTHOR

...view details