ಬೆಳಗಾವಿ:ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುವ ಕಾರ್ಮಿಕರು, ತಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿ: ಹೊರಗುತ್ತಿಗೆ ಕಾರ್ಮಿಕರ ಪ್ರತಿಭಟನೆ - Belagavi latest protest news
ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹೊರಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಹೊರಗುತ್ತಿಗೆ ಕಾರ್ಮಿಕರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಬೆಳಗಾವಿ ವಿಭಾಗದಲ್ಲಿ 370 ಜನ ಕಾರ್ಮಿಕರು ಹೊರಗುತ್ತಿಗೆ ಆಧಾರದ ಮೇಲೆ ಕಳೆದ 15-20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ನೀರು ಸರಬರಾಜು, ಒಳಚರಂಡಿ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರೆಲ್ಲರೂ ತೀರ ಹಿಂದುಳಿದ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿದ್ದಾರೆ. ಈಗ ಸರ್ಕಾರ ನೀಡುತ್ತಿರುವ ವೇತನದಿಂದ ಕುಟುಂಬ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ. ಹೀಗಾಗಿ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂದು ಆಗ್ರಹಿಸಿದರು.