ಅಥಣಿ: ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ತಳವಾರ ಸಮುದಾಯದ ಕೆಲವು ಮುಖಂಡರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆಸುತ್ತಿದ್ದಾರೆ.
ಪರಿವಾರ ತಳವಾರ ಸಮಾಜವನ್ನು ಪ.ಪಂಗಡಕ್ಕೆ ಸೇರಿಸುವಂತೆ ಒತ್ತಾಯ, ಅನಿರ್ದಿಷ್ಟಾವಧಿ ಧರಣಿ - ಅಧಣಿ ಸುದ್ದಿ
ತಳವಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದ ಮಿನಿ ವಿಧಾನಸಭಾ ಮುಂಭಾಗದಲ್ಲಿ ತಳವಾರ ಸಮಾಜದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ.
ರಾಜ್ಯ ಸರ್ಕಾರ ಪರಿವಾರ-ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ತಳವಾರ ಸಮಾಜದ ಮುಖಂಡ ರಾಜು ಜಮಖಂಡಿಕರ ಮುಂದಾಳತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೇಡಿಕೆ ಈಡೇರಿಕೆಗಾಗಿ ವಿಧಾನಸಭಾ ಕಲಾಪ ಮುಗಿಯುವವರೆಗೆ ಅಥಣಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲು ಮುಂದಾಗಿದ್ದಾರೆ.
ಇದೇ ಸಂದರ್ಭದಲ್ಲಿ ರಾಜು ಜಮಖಂಡಿಕರ ಮಾತನಾಡಿ, ಕೇಂದ್ರ ಸರ್ಕಾರ ಪರಿವಾರ-ತಳವಾರ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಎಂದು ರಾಜ್ಯ ಸರ್ಕಾರ ಪ್ರಯಾಣಪತ್ರ ವಿತರಣೆ ಮಾಡುತ್ತಿಲ್ಲ. ಅಧಿವೇಶನದಲ್ಲಿ ತಳವಾರ ಸಮುಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಡಿಸಿಎಂ ಲಕ್ಷ್ಮಣ್ ಸವದಿ ಧ್ವನಿ ಎತ್ತಲಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಪ್ರಮಾಣಪತ್ರ ನಿಡುವಂತೆ ಧರಣಿ ಸತ್ಯಾಗ್ರಹ ಮಾಡಲಾಗುವುದು. ತಳವಾರ ಸಮಾಜದಕ್ಕೆ ಎಸ್ ಟಿ ಪ್ರಮಾಣಪತ್ರ ನೀಡುವವರಿಗೆ ಈ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿಯಲಿದೆ ಎಂದು ಹೇಳಿದರು.