ಬೆಳಗಾವಿ : ಶಿಕ್ಷಕರ ಕಡ್ಡಾಯ ವರ್ಗಾವಣೆ ಕೈಬಿಡುವಂತೆ ಆಗ್ರಹಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಿತು.
ಶಿಕ್ಷಕರ ಕಡ್ಡಾಯ ವರ್ಗಾವಣೆ ಕೈಬಿಡುವಂತೆ ಒತ್ತಾಯಿಸಿ ಪ್ರತಿಭಟನೆ - ಬೆಳಗಾವಿ, ಶಿಕ್ಷಕರ ಪ್ರತಿಭಟನೆ, ಕಡ್ಡಾಯ ವರ್ಗಾವಣೆ ವಿರೋಧಿಸಿ ಪ್ರತಿಭಟನೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಳಗಾವಿ ನಗರ ಘಟಕ, ಜಿಲ್ಲಾಧಿಕಾರಿ ಕಚೇರಿ ಮುಂಭಾಗ, ಕನ್ನಡ ವಾರ್ತೆ, ಈ ಟಿವಿ ಭಾರತ
ಶಿಕ್ಷಕರ ಕಡ್ಡಾಯ ವರ್ಗಾವಣೆ ಕೈಬಿಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಶಿಕ್ಷಕರು, 2017ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿದರು.
ನಗರದ ಕನ್ನಡ ಸಾಹಿತ್ಯ ಭವನದಿಂದ ಮೆರವಣಿಗೆ ನಡೆಸಿದ ನೂರಾರು ಶಿಕ್ಷಕರು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. 2017ರಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಕಡ್ಡಾಯ ವರ್ಗಾವಣೆಯು ಅವೈಜ್ಞಾನಿಕವಾಗಿದೆ. ಇದನ್ನು ರದ್ದುಗೊಳಿಸಿ ಕೋರಿಕೆ ಆಧಾರದ ವರ್ಗಾವಣೆ ಪದ್ದತಿ ಜಾರಿಗೆ ತರುವಂತೆ ಧರಣಿ ನಿರತರು ಸರ್ಕಾರವನ್ನು ಒತ್ತಾಯಿಸಿದರು.
ಸರ್ಕಾರ ಕಡ್ಡಾಯ ವರ್ಗಾವಣೆ ನೆಪದಲ್ಲಿ ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದರೆ ಮಾತ್ರ ಖಾಯಂ ಎ ವಲಯ ಕೊಡುತ್ತಿದೆ. ಪತಿ ಅಥವಾ ಪತ್ನಿ ಒಬ್ಬರೆ ಸರ್ಕಾರಿ ಶಿಕ್ಷಕರಾಗಿದ್ದರೆ ಅವರನ್ನು ವರ್ಗಾವಣೆ ಮಾಡುವ ಯೋಜನೆ ತಂದು ತಾರತಮ್ಯ ಮಾಡುತ್ತಿದೆ. ಈ ನಿರ್ಣಯವನ್ನು ಬಿಡಬೇಕು. ಇಲ್ಲದಿದ್ದರೆ ಜುಲೈ 21ರಂದು ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.