ಗೋಕಾಕ್:ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ ನೀಡುವ ಜೊತೆಗೆ ಮಹಿಳೆಯರು ಮಹಿಳಾ ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಗೋಕಾಕ್ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಯಿತು.
ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ - ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ
ನೆರೆ ಪೀಡಿತ ಸಂತ್ರಸ್ತರಿಗೆ ಪರಿಹಾರ ಧನ ನೀಡುವ ಜೊತೆಗೆ ಮಹಿಳೆಯರು ಮಹಿಳಾ ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ.
ನೆರೆ ಸಂತ್ರಸ್ತರಿಗೆ ಪರಿಹಾರ ಧನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಗೋಕಾಕ್ ತಾಲೂಕಿನಲ್ಲಿ ಅತಿಯಾದ ಪ್ರವಾಹದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾಳಾಗಿದ್ದು, ಜನರು ಪರದಾಡುವಂತಾಗಿದೆ. ಈವರೆಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಧನ ನೀಡದೇ ಇರುವುದು ಖಂಡನೀಯ. ಅಧಿಕಾರಿಗಳು ಕೂಡ ಜನರ ಕಷ್ಟಕ್ಕೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.
ಶೀಘ್ರದಲ್ಲಿ ಸರ್ಕಾರ ಈ ಬಗ್ಗೆ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಪರಿಹಾರ ನೀಡಬೇಕು ಮತ್ತು ಮಹಿಳೆಯರು ಸಂಘಗಳಲ್ಲಿ ತೆಗೆದುಕೊಂಡ ಸಾಲ ಸಂಪೂರ್ಣ ಮನ್ನಾ ಮಾಡಬೇಕೆಂದು ಆಗ್ರಹಿಸಿದರು.