ಕರ್ನಾಟಕ

karnataka

By

Published : Jun 8, 2020, 6:59 PM IST

ETV Bharat / state

ನೇಕಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ..

ಸರ್ಕಾರ ಕೂಡಲೇ ನೇಕಾರರ ನೆರವಿಗೆ ಬರಬೇಕು. ರಾಜ್ಯ ಸರ್ಕಾರದಿಂದ 300 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ನೆರವಿಗೆ ಬರಬೇಕು. ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡಬೇಕುಂದು ಬೇಡಿಕೆ ಇಟ್ಟಿದ್ದಾರೆ.

Protest demanding special package for weavers
ನೇಕಾರರಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ :ಲಾಕ್‍ಡೌನ್ ಸಂಕಷ್ಟಕ್ಕೆ ಸಿಲುಕಿರುವ ನೇಕಾರರ ಕುಟುಂಬಗಳಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ನೂರಾರು ನೇಕಾರರ ಕುಟುಂಬಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.

ನೇಕಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ..

ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ನೇಕಾರರು, ಲಾಕ್‍ಡೌನ್ ಸಂಕಷ್ಟಕ್ಕೆ ಸಿಲುಕಿರುವ ನೇಕಾರರ ಬದುಕು ಬೀದಿಗೆ ಬಿದ್ದಿವೆ. ನೇಕಾರರು ಜೀವನಕ್ಕೆ ಮಾರ್ಗ ಕಾಣದೇ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸರ್ಕಾರ ಕೂಡಲೇ ನೇಕಾರರ ನೆರವಿಗೆ ಬರಬೇಕು. ರಾಜ್ಯ ಸರ್ಕಾರದಿಂದ 300 ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸುವ ಮೂಲಕ ನೆರವಿಗೆ ಬರಬೇಕು. ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡಬೇಕು.

2 ಸಾವಿರ ರೂ.ನೆರವನ್ನು 5 ಸಾವಿರಕ್ಕೆ ಏರಿಸಬೇಕು. ಸರ್ಕಾರ ನೇಕಾರರು ಉತ್ಪಾದಿಸಿದ ಸೀರೆಗಳ ಖರೀದಿ ಸೇರಿ ಹಲವು ಬೇಡಿಕೆಗಳನ್ನು ಈಡೇರಿಸಬೇಸುವಂತೆ ಒತ್ತಾಯಿಸಿ ನೂರಾರು ನೇಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ ಮಾಜಿ ನಗರ ಸೇವಕ ರಮೇಶ ಸೊಂಟಕ್ಕಿ, ಜಿಲ್ಲಾ ನೇಕಾರರ ವೇದಿಕೆಯ ಕಾರ್ಯದರ್ಶಿ ಪರಶುರಾಮ್ ಢಂಗೆ,ನೀಲಕಂಠ ಮಾಸ್ತಮರ್ಡಿ, ನಾರಾಯಣ ಕಾಮಕರ, ಶ್ರೀನಿವಾಸ ತಾಳೂಕರ ಇದ್ದರು.

For All Latest Updates

ABOUT THE AUTHOR

...view details