ಕರ್ನಾಟಕ

karnataka

ETV Bharat / state

ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

Protest demanding the implementation of Justice Nagamohan Das Report
ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

By

Published : Jul 4, 2020, 2:51 PM IST

ಬೆಳಗಾವಿ:ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ತರಬೇಕು ಎಂದು ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಸಂಘದ ಪದಾಧಿಕಾರಿಗಳು, ಶತಮಾನಗಳಿಂದಲೂ ಸರ್ಕಾರದ ಸೌಲಭ್ಯಗಳಿಂದ ವಂಚಿತವಾಗಿರುವ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡದವರು ಸಮಾಜದಲ್ಲಿ ಹಿಂದುಳಿದಿದ್ದಾರೆ. ಈ ನಿಟ್ಟಿನಲ್ಲಿ ಹಲವು ರಾಜಕೀಯ ನಾಯಕರು, ಸ್ವಾಮೀಜಿಗಳು ಹಾಗೂ ಸಮುದಾಯದ ನಾಯಕರು ಹೋರಾಟ ನಡೆಸಿದ್ದಾರೆ. ಈ ಹೋರಾಟದ ಫಲವಾಗಿ ರಾಜ್ಯ ಸರ್ಕಾರವು ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿ ವರದಿ ನೀಡಲು ಮನವಿ ಮಾಡಿತ್ತು. ಅದರಂತೆ ಸಮಗ್ರ ವರದಿ ನೀಡಿರುವ ನಾಗಮೋಹನ್ ದಾಸ್ ಪರಿಶಿಷ್ಟ ಸಮುದಾಯಕ್ಕೆ ನೀಡಲಾಗಿರುವ ಶೇ.3ರಷ್ಟು ಮೀಸಲಾತಿಯನ್ನು ಶೆ.7ಕ್ಕೆ ಏರಿಕೆ ಮಾಡುವಂತೆ ತಿಳಿಸಿದ್ದರು.

ಸದ್ಯ ಶೇ.3ರಷ್ಟು ಮೀಸಲಾತಿ ಪಡೆಯುತ್ತಿರುವ ಪ. ಪಂಗಡದವರು ಸರ್ಕಾರದ ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಸಮುದಾಯಕ್ಕೆ ಶೇ.7ರಷ್ಟು ಮೀಸಲಾತಿ ನೀಡಬೇಕು. ಹಲವು ಶತಮಾನಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಬೇಕು. ಹಿಂದುಳಿದ ಪರಿಶಿಷ್ಟ ಜನಾಂಗದ ಹಿತ ಕಾಯಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details