ಅಥಣಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ರೂಪಿಸಿದ ಕಾಣದ ಕೈಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಜಾರಕಿಹೊಳಿ ಬೆಂಬಲಿಗರಿಂದ ಅಥಣಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಇದೆ ವೇಳೆ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೇವರ್ಗಿ ಸಂಕೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಸಾಂಕೇತಿಕ ಧರಣಿ ನಡೆಸಿದರು. ಸಿಡಿ ಪ್ರಕರಣ ಆದಷ್ಟು ಬೇಗ ತನಿಖೆ ಮುಗಿಸುವಂತೆ ಅಥಣಿ ತಹಶೀಲ್ದಾರ್ ದುಂಡಪ್ಪ ಕೋಮಾರ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಷಡ್ಯಂತ್ರ ರೂಪಿಸಿದವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ಇದೇ ವೇಳೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿದ್ದಪ್ಪ ಮುದಕಣ್ಣವರ ಹಾಗೂ ಬಸವರಾಜ ಯಡೂರ ಮಾತನಾಡಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ತಂತ್ರ ರೂಪಿಸಲಾಗಿದೆ. ಅವರ ರಾಜಕೀಯದಲ್ಲಿ ಬೆಳವಣಿಗೆ ಸಹಿಸದೆ ಈ ರೀತಿ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬೆಳಗಾವಿ ನಗರದಲ್ಲಿ ವಾಲ್ಮೀಕಿ ನಾಯಕ ಸಮಾಜದಿಂದ ಜಾರಕಿಹೊಳಿಯನ್ನು ಸಚಿವ ಸಂಪುಟ ಸೇರಿಸಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.
ನಕಲಿ ರಾಸಲೀಲೆ ಸಿಡಿ ರಿಲೀಸ್ ಮಾಡಿ ರಮೇಶ್ ಜಾರಕಿಹೊಳಿ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ರಮೇಶ್ ಜಾರಕಿಹೊಳಿ ತೇಜೋವಧೆ ಮಾಡಲು ಷಡ್ಯಂತ್ರ ಮಾಡಿದ್ದಾರೆ. ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಿ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಸಮಾಜದ ನಾಯಕರು ಪತ್ರ ಬರೆದು ಮನವಿ ಮಾಡಿಕೊಂಡರು.