ಬೆಳಗಾವಿ:ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರು ಮತ್ತು ರೈತರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಳಸಾ ಬಂಡೂರಿ ಯೋಜನೆಗೆ ಆಗ್ರಹಿಸಿ ಪ್ರತಿಭಟನೆ - ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಪ್ರತಿಭಟನೆ
ಕಳಸಾ ಬಂಡೂರಿ ನಾಲಾ ಜೋಡಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಹದಾಯಿ ಹೋರಾಟಗಾರರು ಮತ್ತು ರೈತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆ
ಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆ ಜಾರಿಗೆ ಪದೇ ಪದೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಈ ಯೋಜನೆ ಜಾರಿಯಿಂದ ಮಲಪ್ರಭಾ ನದಿ ತೀರದ ರೈತರಿಗೆ ಅನುಕೂಲ ಆಗುತ್ತದೆ. ಯೋಜನೆ ಜಾರಿಗೊಳಿಸುವಂತೆ ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರ ಮತ್ತು ರಾಜ್ಯದ ಸಂಸದರು ಯೋಜನೆ ಜಾರಿಗೆ ಪ್ರಧಾನಿಗೆ ಒತ್ತಡ ಹೇರುವಂತೆ ರೈತರು ಆಗ್ರಹಿಸಿದರು. ಬಳಿಕ ಬೈಲಹೊಂಗಲ ತಹಶೀಲ್ದಾರರ ಮೂಲಕವೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಲಾಯಿತು.