ಅಥಣಿ: 'ಸಂತ್ರಸ್ತರು ಕುಡುಕರು' ಎಂದು ಸಚಿವ ಶ್ರೀಮಂತ ಪಾಟೀಲ ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ, ಸಚಿವರು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿ ಅಥಣಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು.
'ಸಂತ್ರಸ್ತರು ಕುಡುಕರು' ಹೇಳಿಕೆ: ಅಥಣಿಯಲ್ಲಿ ಸಚಿವರ ವಿರುದ್ಧ ಪ್ರತಿಭಟನೆ - ಅಥಣಿಯಲ್ಲಿ ಪ್ರತಿಭಟನೆ
ಸಚಿವ ಶ್ರೀಮಂತ ಪಾಟೀಲ್ ಅವರ 'ಸಂತ್ರಸ್ತರು ಕುಡುಕರು' ಎಂಬ ಹೇಳಿಕೆಯನ್ನು ವಿರೋಧಿಸಿ, ಸಚಿವರು ಕ್ಷಮಾಪಣೆ ಕೇಳುವಂತೆ ಒತ್ತಾಯಿಸಿ ಅಥಣಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ವತಿಯಿಂದ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಯಿತು.
ಅಥಣಿಯಲ್ಲಿ ಪ್ರತಿಭಟನೆ
ಅಥಣಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಸಾಂಕೇತಿಕವಾಗಿ ಧರಣಿ ನಡೆಸಿ, ಸಚಿವ ವಿರುದ್ಧ ಘೋಷಣೆ ಕೂಗಿದರು. ನಂತರ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ಅಥಣಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರಾದ ಬಸವರಾಜ ಬೂಬ್ನಾಳ, ಸಚಿವ ಶ್ರೀಮಂತ ಪಾಟೀಲ್ ನೆರೆ ಸಂತ್ರಸ್ತರು ಪರಿಹಾರ ಕೇಳಿದ್ದಕ್ಕೆ, ಪ್ರವಾಹದಿಂದ ತತ್ತರಿಸಿರುವ ಜನರಿಗೆ ಕುಡುಕರು ಎಂದು ಹೇಳಿದ್ದಾರೆ. ತಕ್ಷಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಒತ್ತಾಯಿಸಿದರು.