ಬೆಳಗಾವಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಇಲಾಖೆ ಸಿಬ್ಬಂದಿ ಹಾಗೂ ಎಐಟಿಯುಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಕಳೆದ ನಾಲ್ಕು ವರ್ಷಗಳಿಂದ ಕೆಎಸ್ಆರ್ಟಿಸಿ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಇದರಿಂದ ಸಾರಿಗೆ ಇಲಾಖೆ ಸಿಬ್ಬಂದಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ. ರಾಜ್ಯ ಸರ್ಕಾರ ಈ ಬಗ್ಗೆ ಶೀಘ್ರ ಕ್ರಮಕೈಗೊಳ್ಳವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಯಡಿಯೂರಪ್ಪಗೆ ಮನವಿ ಸಲ್ಲಿಸಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ.. ಬೆಳಗಾವಿಯಲ್ಲಿ ಸಾರಿಗೆ ಇಲಾಖಾ ಸಿಬ್ಬಂದಿ ಪ್ರತಿಭಟನೆ
ಕಳೆದ ನಾಲ್ಕು ವರ್ಷಗಳಿಂದ ಕೆಎಸ್ಆರ್ಟಿಸಿ ಸಿಬ್ಬಂದಿ ವೇತನ ಪರಿಷ್ಕರಣೆ ಮಾಡುತ್ತಿಲ್ಲ. ಇದರಿಂದ ಸಾರಿಗೆ ಇಲಾಖೆ ಸಿಬ್ಬಂದಿ ಜೀವನ ನಿರ್ವಹಣೆ ಮಾಡಲು ಕಷ್ಟವಾಗುತ್ತಿದೆ..
ಸಾರಿಗೆ ಇಲಾಖಾ ಸಿಬ್ಬಂದಿ ಪ್ರತಿಭಟನೆ
ಪ್ರತಿಭಟನೆಯಲ್ಲಿ ನಾಗೇಶ ಸಾತೇರಿ, ಯಲ್ಲೂಬಾಯಿ ಶೀಗಿಹಳ್ಳಿ, ಮೀನಾಕ್ಷಿ ಕೋಟಗಿ, ಸುಜಾತಾ ಬೆಳಗಾಂವಕರ್, ಸವಿತಾ ದಿಡ್ರೆ, ಅನಿತಾ ಕಾಮನ್ನಾಚೆ ಭಾಗಿಯಾಗಿದ್ದರು.