ಚಿಕ್ಕೋಡಿ :ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳಿಂದ ನಿನ್ನೆ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಎಎ ಮತ್ತು ಎನ್ಆರ್ಸಿಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು.
ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಚಿಕ್ಕೋಡಿಯಲ್ಲಿ ಪ್ರತಿಭಟನೆ - Belgaum District S PLakshmana Nimbaragi ststement
ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ಚಿಕ್ಕೋಡಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನೂರಾರು ಸಂಖ್ಯೆಯಲ್ಲಿ ಸಭೆ ನಡೆಸಿ, ಬಳಿಕ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಹೋರಾಟಗಾರ ಮಹಾವೀರ ಮೋಹಿತೆ, ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗುತ್ತಿದೆ. ಹೀಗಿರುವಾಗ ಕಾಯ್ದೆಯ ಅವಶ್ಯಕತೆ ಏನಿತ್ತು? ಎಂದು ಪ್ರಶ್ನಿಸಿದ್ರು. ಈಗಾಗಲೇ ಆರ್ಥಿಕ ಪರಿಸ್ಥಿತಿ ದಿವಾಳಿಯಾಗುತ್ತಿದೆ. ಹೀಗೆ ಮುಂದುವರೆದರೆ ನಮ್ಮ ಜನರು ಪಾಕಿಸ್ತಾನ ಇಲ್ಲ ಅಫ್ಘಾನಿಸ್ತಾನಕ್ಕೋ ಹೋಗಬೇಕಾಗುತ್ತದೆ ಎಂದರು.
ಈ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಪ್ರತಿಕ್ರಿಯಿಸಿ, ಶಾಂತಿ ಸುವ್ಯವಸ್ಥೆಗೆ ಸಹಕರಿಸುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಸಹಕರಿಸಿ ಪ್ರತಿಭಟನಾಕಾರರು ಸುವ್ಯವಸ್ಥೆಯಿಂದ ಪ್ರತಿಭಟನೆಯನ್ನು ಮುಗಿಸಿದ್ದಾರೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಇದರ ಬಗ್ಗೆ ಪ್ರತಿಯೊಬ್ಬರಿಗೂ ತಿಳಿ ಹೇಳಲಾಗುತ್ತಿದೆ ಎಂದು ಹೇಳಿದರು.