ಚಿಕ್ಕೋಡಿ: 2019ರ ಆಗಸ್ಟ್ ತಿಂಗಳಲ್ಲಿ ಕೃಷ್ಣಾ ನದಿಯಿಂದ ಉಂಟಾದ ಪ್ರವಾಹದಲ್ಲಿ ಮನೆ ಕಳೆದುಕೊಂಡ ನೈಜ ಸಂತ್ರಸ್ತರಿಗೆ ಮನೆ ಮಂಜೂರು ಮಾಡದಿರುವುದನ್ನು ಖಂಡಿಸಿ ಭಿರಡಿ ಗ್ರಾಮದ ನೆರೆ ಸಂತ್ರಸ್ತರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ತಹಶೀಲ್ದಾರ ಕಚೇರಿ ಎದುರು ಅನಿರ್ದಿಷ್ಟಾವಧಿವರೆಗೆ ಉಪವಾಸ ಧರಣಿ ನಡೆಸಿದರು.
ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಪ್ರತಿಭಟನೆ - ಚಿಕ್ಕೋಡಿಯಲ್ಲಿ ಪ್ರತಿಭಟನೆ
ನೆರೆ ಬಂದು ವರ್ಷ ಕಳೆದರೂ ಸರ್ಕಾರ ನಿಜವಾದ ಪ್ರವಾಹ ಸಂತ್ರಸ್ತರಿಗೆ ಈವರೆಗೂ ಮನೆಗಳನ್ನು ಮಂಜೂರು ಮಾಡಿಲ್ಲ ಎಂದು ಆರೋಪಿಸಿ ಭಿರಡಿ ಗ್ರಾಮದ ನೆರೆ ಸಂತ್ರಸ್ತರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಭೀರಡಿ ಗ್ರಾಮದಲ್ಲಿ ಕಳೆದ ವರ್ಷ ಕೃಷ್ಣಾ ನದಿಗೆ ನೆರೆ ಬಂದು ಪ್ರವಾಹ ಸಂತ್ರಸ್ತರು ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ನೆರೆ ಬಂದು ವರ್ಷ ಕಳೆದರೂ ಸರ್ಕಾರ ನಿಜವಾದ ಪ್ರವಾಹ ಸಂತ್ರಸ್ತರಿಗೆ ಈವರೆಗೂ ಮನೆಗಳನ್ನು ಮಂಜೂರು ಮಾಡಿಲ್ಲ ಎಂದು ಆರೋಪಿಸಿ ಅನಿರ್ದಿಷ್ಟಾವಧಿಯವರೆಗೆ ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ.
ಕಳೆದ ವಾರ ಉಪವಾಸ ಸತ್ಯಾಗ್ರಹ ಕೈಗೊಂಡಾಗ ತಹಶೀಲ್ದಾರರು ಒಂದು ವಾರದೊಳಗೆ ತಮ್ಮ ಸಮಸ್ಯೆಗೆ ಸ್ಪಂದಿಸಿ, ನೊಂದ ನಿಜವಾದ ಸಂತ್ರಸ್ತರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಸತ್ಯಾಗ್ರಹ ಕೈಬಿಟ್ಟಿದ್ದೆವು. ಆದರೆ ಈಗ ಒಂದು ವಾರ ಕಳೆದರೂ ಕೂಡ ತಹಶೀಲ್ದಾರರು ನಮಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ತಹಶೀಲ್ದಾರ್ ಎನ್.ಬಿ.ಗೆಜ್ಜಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಮರು ಸಮೀಕ್ಷೆ ಮಾಡಿ, ಸರ್ವೇ ಮಾಡುವಂತೆ ನಿರ್ದೇಶನ ನೀಡಿದ್ದರೂ ಸಂಬಂಧಿಸಿದ ಅಧಿಕಾರಿಗಳು ಇಲ್ಲಿವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.