ಬೆಳಗಾವಿ : ಬತ್ತಿ ಹೋಗಿರುವ ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡಿಸುವಲ್ಲಿ ವಿಫಲವಾಗುತ್ತಿರುವ ರಾಜ್ಯ ಸರಕಾರದ ವಿರುದ್ಧ ಅಥಣಿ ಹಾಗೂ ಇತರ ಕೃಷ್ಣಾ ತೀರದ ಜನತೆಬಂದ್ ಆಚರಿಸುತ್ತಿದ್ದಾರೆ. ಈ ಹೋರಾಟ ಬೆಂಬಲಿಸಿ ಕನ್ನಡ ಪರ ಮತ್ತು ರೈತ ಪರ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಹೆಚ್ಚುವರಿ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕೃಷ್ಣಾ ನದಿಗೆ ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ - undefined
ಕೃಷ್ಣಾ ನದಿಗೆ ನೀರು ಬಿಡುವಂತೆ ಪತ್ರ ಬರೆದರೆ ಸಾಲದು, ರಾಜ್ಯ ಸರ್ಕಾರ ಮಹಾರಾಷ್ಟ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಮನವರಿಕೆ ಮಾಡಿಕೊಂಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ.
![ಕೃಷ್ಣಾ ನದಿಗೆ ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ](https://etvbharatimages.akamaized.net/etvbharat/prod-images/768-512-3333953-thumbnail-3x2-bgm.jpg)
ಕೃಷ್ಣಾ ನದಿಗೆ ನೀರು ಬಿಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
ಕೃಷ್ಣಾ ನದಿಗೆ ನೀರು ಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿದ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ಹಿಡಕಲ್ ಜಲಾಶಯದಿಂದ ಕೃಷ್ಣಾ ನದಿಗೆ ಸುಮಾರು 94 ಕಿಲೋ ಮೀಟರ್ ದೂರದಿಂದ ಒಂದು ಟಿಎಮ್ಸಿ ನೀರು ಹರಿಸುವ ನಿರ್ಧಾರ ಅತ್ಯಂತ ಅವೈಜ್ಞಾನಿಕವಾಗಿದೆ. ಬಿಟ್ಟ ನೀರು ಕೃಷ್ಣಾ ನದಿ ತಲುಪಲು ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಮಹಾರಾಷ್ಟ್ರಕ್ಕೆ ಸರ್ವಪಕ್ಷೀಯ ನಿಯೋಗ ಕಳಿಸಿ ಕೊಯ್ನಾದಿಂದ ನೀರು ಬಿಡಿಸಬೇಕೆ ಹೊರತು, ಇಲ್ಲಿಯೇ ಕುಳಿತು ಪತ್ರಗಳನ್ನು ಬರೆಯುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ .