ಬೆಳಗಾವಿ: ಜಿಲ್ಲೆಯ ಬೇಡರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಮತ್ತು ವಾಲ್ಮೀಕಿ ಸಂಘಟನೆಗಳ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ: ಬೇಡರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ - ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ
ಜಿಲ್ಲೆಯಲ್ಲಿನ ಬೇಡರ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಮತ್ತು ವಾಲ್ಮೀಕಿ ಸಂಘಟನೆಗಳ ವತಿಯಿಂದ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಬೇಡರ ಎಂದು ಪರಿಗಣಿಸಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ
ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಸಮಾಜದ ಮುಖಂಡರು, ಜಿಲ್ಲೆಯಲ್ಲಿನ ಬೇರಡ ಹಾಗೂ ಬೇಡರ ಜಾತಿ ಬೇರೆಯಲ್ಲ. ಬೇಡರ ಜಾತಿಗೆ ವಾಲ್ಮೀಕಿ, ನಾಯಕ ಹಾಗೂ ಬೇರಡ ಜಾತಿಗಳು ಪರ್ಯಾಯ ಪದಗಳಾಗಿವೆ. ಆದರೆ,ಹಿಂದುಳಿದ ಬೇರಡ ಜಾತಿ ಎಂದು ನಮೂದಿಸಿದ್ದರಿಂದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ.
ಇದರಿಂದ ಸಮಾಜದಲ್ಲಿ ಕೆಲವರು ಸೌಲಭ್ಯದಿಂದ ವಂಚಿತರಾಗುವಂತಾಗಿದೆ. ಸರ್ಕಾರ ಈ ಕೂಡಲೇ ಬೇರಡ ಜಾತಿಗೂ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.