ಬೆಳಗಾವಿ: ಕೊರೊನಾ ಸಂದರ್ಭದಲ್ಲಿ ಕೋವಿಡ್ ಸೋಂಕಿತರು ಸೇರಿದಂತೆ ಅವರ ಕುಟುಂಬಸ್ಥರು ಆಹಾರ ಸಿಗದೇ ಕಷ್ಟ ಅನುಭವಿಸಿದ ಪ್ರಕರಣಗಳು ನಡೆದಿದ್ದವು. ಅಲ್ಲದೇ ಆಕ್ಸಿಜನ್ ಕೊರತೆ ಎದುರಾಗಿತ್ತು. ಇಂತಹ ಸಮಯದಲ್ಲಿ ನಗರದ ಪೃಥ್ವಿ ಫೌಂಡೇಶನ್ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿದೆ.
ಉಸಿರಾಟದ ತೊಂದರೆ ಇರುವವರಿಗೆ ಆಕ್ಸಿಜನ್ ಸಿಲಿಂಡರ್ ಜೊತೆಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಮಧ್ಯಾಹ್ನದ ಊಟ ವಿತರಣೆ ಮಾಡುತ್ತಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಪೃಥ್ವಿ ಫೌಂಡೇಶನ್ ವತಿಯಿಂದ ನಿತ್ಯವೂ ನೆರವು ನೀಡುವ ಮೂಲಕ ಮಾನವೀಯ ಕಾರ್ಯ ಮಾಡುತ್ತಿದ್ದಾರೆ. ದಿನವೂ ಮಾಸ್ಕ್, ಸ್ಯಾನಿಟೈಸರ್, ಹಣ್ಣುಗಳು, ನೀರಿನ ಬಾಟಲ್, ಊಟ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.