ಕರ್ನಾಟಕ

karnataka

ETV Bharat / state

ಅಥಣಿಯಲ್ಲಿ ಭರದಿಂದ ಸಾಗಿದ ಪಲ್ಸ್​ ಪೋಲಿಯೋ ಕಾರ್ಯಕ್ರಮ - ಪಲ್ಸ್​ ಪೋಲಿಯೋ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂದು  ಪಲ್ಸ್​ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಅಂಗನವಾಡಿ, ಸರ್ಕಾರಿ ಆಸ್ಪತ್ರೆ ಹಾಗೂ ಪೋಲಿಯೋ ಲಸಿಕೆ ಕೇಂದ್ರದಲ್ಲಿ ಪಲ್ಸ್​ ಪೋಲಿಯೋ ಲಸಿಕೆ ಹಾಕಿಸಿಕೊಂಡು ಹೋಗುತ್ತಿದ್ದಾರೆ.

Pulse polio program in Athani
ಅಥಣಿಯಲ್ಲಿ ಪಲ್ಸ್​ ಪೋಲಿಯೋ ಕಾರ್ಯಕ್ರಮ

By

Published : Jan 19, 2020, 12:36 PM IST

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಇಂದು ಪಲ್ಸ್​ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗಿದೆ. ಪಾಲಕರು ತಮ್ಮ ಮಕ್ಕಳಿಗೆ ಅಂಗನವಾಡಿ, ಸರ್ಕಾರಿ ಆಸ್ಪತ್ರೆ ಹಾಗೂ ಪೋಲಿಯೋ ಲಸಿಕೆ ಕೇಂದ್ರದಲ್ಲಿ ಪಲ್ಸ್​ ಪೋಲಿಯೋ ಲಸಿಕೆ ಹಾಕಿಸಿಕೊಂಡು ಹೋಗುತ್ತಿದ್ದಾರೆ.

ಅಥಣಿಯಲ್ಲಿ ಪಲ್ಸ್​ ಪೋಲಿಯೋ ಕಾರ್ಯಕ್ರಮ

ತಾಲೂಕಿನಲ್ಲಿ ಒಟ್ಟು 265 ಪೋಲಿಯೋ ಲಸಿಕೆ ಕೇಂದ್ರಗಳಲ್ಲಿ ಐದು ವರ್ಷದ ಕೆಳಗಿನ58096 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಒಟ್ಟು 81 ತಂಡಗಳು ಕಾರ್ಯನಿರ್ವಹಿಸಲಿದ್ದು, 57 ಜನ ಮೇಲ್ವಿಚಾರಕ ಅಧಿಕಾರಿಗಳನ್ನು ನೇಮಿಸಲಾಗಿದೆ. ಈ ಬಾರಿ ರಾಜ್ಯದಲ್ಲಿ ಸುಮಾರು 64,65,561 ಮಕ್ಕಳು ಲಸಿಕೆ ಹಾಕಿಸಿಕೊಳ್ಳಲಿದ್ದು, ಲಸಿಕೆ ಹಾಕಲು 33,021 ಬೂತ್​ಗಳು, 46,620 ತಂಡಗಳು, 1,09,554 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು, 2,111 ಟ್ರಾನ್ಸಿಟ್ ತಂಡಗಳನ್ನು ರಚನೆ ಮಾಡಲಾಗಿದೆ

ರಾಜಾದ್ಯಂತ ಬೆಳಗ್ಗೆ 8 ರಿಂದ ಸಂಜೆ 5 ವರೆಗೆ ಲಸಿಕೆ ಹಾಕಲಾಗುತ್ತೆ. ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ನಾಳೆಯಿಂದ ಮನೆ ಮನೆಗೆ ಹೋಗಿ ಲಸಿಕೆ ಹಾಕಲಿದ್ದಾರೆ.

ABOUT THE AUTHOR

...view details