ಕರ್ನಾಟಕ

karnataka

ETV Bharat / state

ಎಡಬಿಡದೇ ಸುರಿದ ಮಳೆ.. ತೇಲಿಹೋದ್ವು ಕಾರು- ಬೈಕ್​​ - undefined

ಯಕ್ಸಂಬಾ ಪಟ್ಟಣದ ಸುತ್ತಮುತ್ತ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ದನ - ಕರುಗಳು, ಕಾರ್​ - ಬೈಕ್​ಗಳೆಲ್ಲವೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

ಮಳೆಯ ಹಾನಿ

By

Published : Jun 24, 2019, 1:01 PM IST

ಚಿಕ್ಕೋಡಿ : ಯಕ್ಸಂಬಾ ಪಟ್ಟಣದ ಸುತ್ತಮುತ್ತ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ಹಾನಿಯುಂಟಾಗಿ ಸಾರ್ವಜನಿಕರ ಜೀವನ ಅಸ್ತವ್ಯಸ್ತವಾಗಿದೆ.

ನಗರದಲ್ಲಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಿನ್ನೆ ಸುರಿದ ಭಾರಿ‌ ಪ್ರಮಾಣದ ಮಳೆಯಿಂದಾಗಿ ಮೇಕೆ, ದನ - ಕರುಗಳು, ಕಾರ್​-ಬೈಕ್​ಗಳೆಲ್ಲವೂ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಇದರಿಂದ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ.

ಮಳೆಯಿಂದಾಗಿ ಸಾರ್ವಜನಿಕ ಆಸ್ಪತ್ರೆಗೂ ನೀರು ನುಗ್ಗಿದ್ದು, ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಆಸ್ಪತ್ರೆಗೆ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಳೆಯಿಂದಾಗಿ ವೃದ್ಧೆ ಸಾವು :ರಾತ್ರಿಯಿಡಿ ಸುರಿದ ಮಳೆಯಿಂದ ಮಳೆ ನೀರು ಮನೆಯೊಳಗೆ ನುಗ್ಗಿದ್ದರ ಪರಿಣಾಮ‌ ಯಕ್ಸಂಬಾ ಪಟ್ಟಣದ ಅಂಬೇಡ್ಕರ್ ನಗರದ ನಿವಾಸಿ ಚಂಪಾಬಾಯಿ ಸಿಂಧೆ ಎಂಬ ವೃದ್ಧೆ (80) ಸ್ಥಳದಲ್ಲೇ ವೃತಪಟ್ಟಿದ್ದಾರೆ.

For All Latest Updates

TAGGED:

ABOUT THE AUTHOR

...view details