ಕರ್ನಾಟಕ

karnataka

ETV Bharat / state

ಖಾನಾಪುರದಲ್ಲಿ ಧಾರಾಕಾರ ಮಳೆ: ಪ್ರವಾಹಪೀಡಿತ ಪ್ರದೇಶಗಳಿಗೆ ಅಂಜಲಿ ನಿಂಬಾಳ್ಕರ್ ಭೇಟಿ - flood affected areas

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ಖಾನಾಪುರ ತಾಲೂಕಿನಲ್ಲಿ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ. ನದಿ ತೀರದ ಪ್ರದೇಶಗಳಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನದಿ ತೀರದ ಪ್ರದೇಶಗಳಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ
ನದಿ ತೀರದ ಪ್ರದೇಶಗಳಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ

By

Published : Aug 5, 2020, 6:05 PM IST

Updated : Aug 5, 2020, 7:14 PM IST

ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದ್ದು, ಖಾನಾಪುರ ತಾಲೂಕಿನಲ್ಲಿ ಮಲಪ್ರಭಾ ನದಿ ತುಂಬಿ ಹರಿಯುತ್ತಿದೆ.

ಪ್ರವಾಹಪೀಡಿತ ಪ್ರದೇಶಗಳಿಗೆ ಶಾಸಕಿ ನಿಂಬಾಳ್ಕರ್ ಭೇಟಿ

ಮಲಪ್ರಭಾ ನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ನದಿ ತೀರದ ಪ್ರದೇಶಗಳಿಗೆ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜನರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಖಾನಾಪುರ ಪಟ್ಟಣದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಪಟ್ಟಣದ ಮಲಪ್ರಭಾ ‌ನದಿ‌ ಸೇತುವೆ ಪರಿಶೀಲನೆ ನಡೆಸಿ, ಅನಗತ್ಯವಾಗಿ ಸೇತುವೆ ಮೇಲೆ ಸಂಚರಿಸದಂತೆ ನಿಂಬಾಳ್ಕರ್ ಸ್ಥಳೀಯರಲ್ಲಿ ಮನವಿ ಮಾಡಿದರು.

Last Updated : Aug 5, 2020, 7:14 PM IST

ABOUT THE AUTHOR

...view details