ಬೆಳಗಾವಿ: ಕಳೆದ ಎರಡು ದಿನಗಳಿಂದ ಕುಂದಾನಗರಿ ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಇಲ್ಲಿನ ಆರ್‌ಟಿಒ ಮೈದಾನದಲ್ಲಿರುವ ತಾತ್ಕಾಲಿಕ ತರಕಾರಿ ಮಾರುಕಟ್ಟೆ ಸಂಪೂರ್ಣ ಜಲಾವೃತಗೊಂಡಿದೆ. ಇದರಿಂದ ವ್ಯಾಪಾರಸ್ಥರು, ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಳಗಾವಿಯಲ್ಲಿ ನಿರಂತರ ಮಳೆ: ತಾತ್ಕಾಲಿಕ ತರಕಾರಿ ಮಾರುಕಟ್ಟೆ ಜಲಾವೃತ - ತಾತ್ಕಾಲಿಕ ತರಕಾರಿ ಮಾರುಕಟ್ಟೆ ಜಲಾವೃತ
ಕುಂದಾನಗರಿಯಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು, ತಾತ್ಕಾಲಿಕ ತರಕಾರಿ ಮಾರುಕಟ್ಟೆಗಳು ಜಲಾವೃತಗೊಂಡಿವೆ.
ಕೋವಿಡ್ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಯಲು ನಗರದ ವಿವಿಧೆಡೆ ತಾತ್ಕಾಲಿಕ ಮಾರುಕಟ್ಟೆ ಸ್ಥಾಪಿಸಲಾಗಿದೆ. ಇದೀಗ ಬೆಳಗಾವಿ ಹೊರವಲಯದ ಆರ್‌ಟಿಒ ಮೈದಾನದಲ್ಲಿ ಸ್ಥಾಪಿಸಲಾಗಿರುವ ತಾತ್ಕಾಲಿಕ ಮಾರುಕಟ್ಟೆ ಮಳೆ ನೀರಿನಿಂದ ಆವರಿಸಿದೆ. ಎಪಿಎಂಸಿ ಮಾರುಕಟ್ಟೆಯನ್ನು ನಾಲ್ಕು ಭಾಗಗಳಾಗಿ ವಿಂಗಡಿಸಲಾಗಿದ್ದು, ನಗರದ ನಾಲ್ಕು ದಿಕ್ಕುಗಳಲ್ಲಿ ತಾತ್ಕಾಲಿಕ ಮಾರುಕಟ್ಟೆ ತೆರೆಯಲಾಗಿದೆ.
ನಗರದ ಆರ್‌ಟಿಒ ಮೈದಾನ, ಸಿಪಿಎಡ್ ಮೈದಾನ, ಯಡಿಯೂರಪ್ಪ ಮಾರ್ಗದ ಮಾಲಿನಿ ಮೈದಾನದಲ್ಲಿ ತಾತ್ಕಾಲಿಕ ಮಾರುಕಟ್ಟೆ ನಿರ್ಮಿಸಲಾಗಿದೆ. ಮಳೆಯಿಂದ ಮೈದಾನದಲ್ಲಿ ಸರಿಯಾದ ವ್ಯವಸ್ಥೆ ಇಲ್ಲದೆ ವ್ಯಾಪಾರಸ್ಥರು ತೀವ್ರ ಪರದಾಟ ನಡೆಸಿದ್ದು, ಮೂಲ ಸ್ಥಳಕ್ಕೆ ಮಾರುಕಟ್ಟೆ ಸ್ಥಳಾಂತರಿಸಲು ವ್ಯಾಪಾರಸ್ಥರು ಆಗ್ರಹಿಸಿದ್ದಾರೆ.