ಕರ್ನಾಟಕ

karnataka

ETV Bharat / state

ಬಿಎಸ್​ವೈ ಟಿಕೇಟ್​ ನೀಡಲ್ಲ ಅಂದ್ರು... ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದೇನೆ : ರಾಜು ಕಾಗೆ ಕಿಡಿ - ಉಗಾರದಲ್ಲಿ ರಾಜು ಕಾಗೆ ಬಿಜೆಪಿ ಟಿಕೆಟ್ ಬಗ್ಗೆ ಹೇಳಿಕೆ

ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಟಿಕೇಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಹ ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಹೇಳಿದ್ದಾರೆ.

ಬಿಜೆಪಿ ಟಿಕೆಟ್ ಕುರಿತು ರಾಜು ಕಾಗೆ ಅಸಮಾಧಾನ

By

Published : Oct 28, 2019, 7:01 PM IST

ಚಿಕ್ಕೋಡಿ : ಯಡಿಯೂರಪ್ಪನವರು ನನಗೆ ಟಿಕೇಟ್ ಕೊಡೊದಿಲ್ಲ ಅಂತ ನೇರವಾಗಿ ಹೇಳಿದ್ದಾರೆ, ಹಾಗಾಗಿ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ಕಾಗವಾಡದ ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಸ್ವಗ್ರಾಮದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ನನಗೆ ಟಿಕೇಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ಸಹ ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೋರ್ಟ್ ಕೇಸ್ ಗಮನದಲ್ಲಿಟ್ಟುಕೊಂಡು ನಾನು ಮುಂದುವರೆಯುತ್ತೇನೆ. ಅನರ್ಹರ ಪರವಾಗಿ ತೀರ್ಪು ಬಂದರೆ ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ ಎಂದರು.

ಬಿಜೆಪಿ ಟಿಕೆಟ್ ಕುರಿತು ರಾಜು ಕಾಗೆ ಅಸಮಾಧಾನ

ಕಾಗವಾಡ ಮತ್ತು ಅಥಣಿ ಮತಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಕಾಗೆ, ಲಕ್ಷ್ಮಣ ಸವದಿಯವರು ನಿಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡುತ್ತಾರಾ ಎಂಬ ಪ್ರಶ್ನೆಗೆ, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ. ನನ್ನ ಸ್ವಂತ ಸಹೋದರನೆ ನನ್ನ ವಿರುದ್ದ ಒಂದು ಬಾರಿ ಚುಣಾವಣೆಯಲ್ಲಿ ಕೆಲಸ ಮಾಡಿದ್ದ, ಹೀಗಾಗಿ ರಾಜಕಾರಣದಲ್ಲಿ ಸಂಬಂಧಗಳು ಲೆಕ್ಕಕ್ಕೆ ಬರಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ABOUT THE AUTHOR

...view details