ಬೆಳಗಾವಿ :ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಖುಷಿಯಲ್ಲಿ ಸಾಮಾಜಿಕ ಅಂತರ ಮರೆತಿರುವ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಮಾಸ್ಕ್ ಧರಿಸದೇ ಬೇಜವಾಬ್ದಾರಿತನ ಮೆರೆದಿದ್ದಾರೆ.
ಖುಷಿಯಲ್ಲಿ ಮೈಮರೆತ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.. ಮಾಸ್ಕ್ ಧರಿಸದೆ ನಿಯಮ ಉಲ್ಲಂಘನೆ.. - Rajya Sabha Member Eranna Kadadi
ಬೆಳಗಾವಿ ಜಿಲ್ಲೆಯ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಗೋಕಾಕ್ ನಗರದಲ್ಲಿನ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿದ ಈರಣ್ಣಾ ಕಡಾಡಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ.
ಖುಷಿಯಲ್ಲಿ ಮೈ ಮರೆತ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಗೋಕಾಕ್ ನಗರದಲ್ಲಿನ ಶೂನ್ಯ ಸಂಪಾದನ ಮಠಕ್ಕೆ ಭೇಟಿ ನೀಡಿದ ಅವರು, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡ ಅದ್ದೂರಿ ಸ್ವಾಗತ ಕಾರ್ಯಕ್ರಮದಲ್ಲಿ ಭಾಗಿಯಾದರು.
ಈ ವೇಳೆ ಸ್ವಾಗತ ಕೋರುವ ಅಬ್ಬರದಲ್ಲಿ ಬಹುತೇಕ ಬಿಜೆಪಿ ಕಾರ್ಯಕರ್ತರು ಕೂಡಾ ಸಾಮಾಜಿಕ ಅಂತರ ಮರೆತಿದ್ದರು. ಕಾರ್ಯಕರ್ತರು ಮಾಸ್ಕ್ ಧರಿಸದೇ ತಮ್ಮದೇ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನರಿಗೆ ಮಾದರಿಯಾಗಬೇಕಾದ ಜನಪ್ರತಿನಿಧಿಗಳೇ ಹೀಗೆ ಮಾಡಿದ್ರೆ ಹೇಗೆ ಎಂದು ಇದೀಗ ಸಾರ್ವಜನಿಕರು ಆಕ್ರೋಶಿತರಾಗಿದ್ದಾರೆ.