ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆ ಕುರಿತು ಕನ್ನಡಪರ ಸಂಘಟನೆಗಳ ಒತ್ತಾಯ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಶೀಘ್ರವೇ ತಜ್ಞರ ಜೊತೆ ಚರ್ಚೆ ನಡೆಸಿ ತೀರ್ಮಾನ ಮಾಡುತ್ತೇವೆ. ಕೋವಿಡ್ ನಿಯಂತ್ರಣಕ್ಕೆ ಬರುತ್ತಿದೆ. ಆದರೆ ಮೆರವಣಿಗೆಗಳ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಅದ್ಧೂರಿ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ತೀರ್ಮಾನವಾಗಿಲ್ಲ: ಸಿಎಂ ಬೊಮ್ಮಾಯಿ ನಿನ್ನೆ ಸಿಂದಗಿಯಲ್ಲಿ ಪ್ರಚಾರ ಮಾಡಿ, ಇವತ್ತು ಬೆಂಗಳೂರು ಹೋಗುತ್ತಿದ್ದೇನೆ. ವಾಲ್ಮೀಕಿ ಜಯಂತಿಯಲ್ಲಿ ಪಾಲ್ಗೊಂಡು ಇಂದು ಸಂಜೆ ಹಾನಗಲ್‌ಗೆ ವಾಪಸ್ ಆಗಲಿದ್ದೇನೆ. ಮೂರು ದಿನಗಳ ಕಾಲ ಹಾನಗಲ್ನಲ್ಲಿ ಉಳಿದುಕೊಂಡು ಪ್ರಚಾರ ಮಾಡುತ್ತೇನೆ. 23ರಂದು ಬೆಳಗಾವಿಗೆ ಬಂದು ಕಿತ್ತೂರು ಚೆನ್ನಮ್ಮ ಉತ್ಸವದಲ್ಲಿ ಭಾಗಿಯಾಗುತ್ತೇನೆ ಎಂದರು.
ಮುಂಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಸಂಬಂಧ ಸಂಪುಟ ಸಭೆಯಲ್ಲಿ ತೀರ್ಮಾನ ಆಗಬೇಕು ಎಂದು ಹೇಳಿದರು.
ಇದನ್ನೂ ಓದಿ:ಉಪ ಕಾರ್ಮಿಕ ಆಯುಕ್ತರ ಪತ್ನಿಗೆ ₹1 ಕೋಟಿ ವಂಚನೆ: ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್, ಪತಿ ಅರೆಸ್ಟ್