ಅಥಣಿ : ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ರಮೇಶ್ ಜಾರಕಿಹೊಳಿ ಹಾಗೂ ಶಾಸಕ ಮಹೇಶ ಕುಮಟಳ್ಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ಸಿಎಂ ಯಡಿಯೂರಪ್ಪ ಆದೇಶ ಹೊರಡಿಸಿದ ಬೆನ್ನಲ್ಲೇ, ಅಥಣಿಯಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಜಾರಕಿಹೊಳಿ, ಕುಮಟಳ್ಳಿ ಅಭಿಮಾನಿಗಳಿಂದ ಅಥಣಿಯಲ್ಲಿ ಸಂಭ್ರಮಾಚರಣೆ.. - belgavi latest news
ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಕರ್ನಾಟಕ ಕೊಳಚೆ ಪ್ರದೇಶಗಳ ( ಅಭಿವೃದ್ಧಿ ಮತ್ತು ನಿರ್ಮೂಲನೆ ) ಅಧಿನಿಯಮ, 1973 ರ ಕಲಂ 34 ( 2 ) ( ಎ ) ರ ಅಡಿಯಲ್ಲಿ ಅಧ್ಯಕ್ಷರನ್ನಾಗಿ ನೇಮಿಸುವುದರ ಜೊತೆಗೆ, ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿ ಉಸ್ತುವಾರಿಯಾಗಿ ನೇಮಿಸಲಾಗಿದೆ.
ಶಾಸಕ ಮಹೇಶ ಕುಮಟಳ್ಳಿಗೆ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ
ಇದೇ ಸಂದರ್ಭದಲ್ಲಿ ಮಾತನಾಡಿದ ಕುಮಟಳ್ಳಿ ಬೆಂಬಲಿಗ ವಿನಯ್ ಪಾಟೀಲ್, ಈ ಇಬ್ಬರು ನಾಯಕರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಮತ್ತು ನಿಗಮ ಮಂಡಳಿ ಸ್ಥಾನಕ್ಕೆ ನೇಮಕ ಮಾಡಿದ ಬಿಎಸ್ವೈ ಮತ್ತು ಕೇಂದ್ರ ನಾಯಕರಿಗೆ ಅಭಿನಂದನೆ ಎಂದರು. ರಮೇಶ ಜಾರಕಿಹೊಳಿ ಅವರಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಕೊಟ್ಟಿದ್ದು ಸಂತೋಷದ ವಿಷಯ. ಅದೇ ರೀತಿ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರಿಗೆ ಸ್ಲಮ್ ಬೋರ್ಡ್ ಅಧ್ಯಕ್ಷರನ್ನಾಗಿ ನೇಮಿಸಿರುವುರಿಂದ ಅನೇಕ ಕೊಳಗೇರಿಗಳು ಅಭಿವೃದ್ದಿಯಾಗುವುದರಲ್ಲಿ ಅನುಮಾನವಿಲ್ಲ ಎಂದರು.