ಚಿಕ್ಕೋಡಿ: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಜಾರಕಿಹೊಳಿ ಬೆಂಬಲಿಗರು ಪ್ರತಿಭಟಿಸಿದ್ದು, ನಮ್ಮ ಸಾಹುಕಾರ್ ಅವರಿಗೆ ನ್ಯಾಯ ದೊರಕುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಎಚ್ಚರಿಸಿದ್ದಾರೆ.
'ಸಾಹುಕಾರ್' ವಿರುದ್ಧ ರಾಜಕೀಯ ಷಡ್ಯಂತ್ರ ಮಾಡಲಾಗಿದೆ: ಬೆಂಬಲಿಗರ ಆಕ್ರೋಶ, ಪ್ರತಿಭಟನೆ - ramesh jarakiholi followers protest at chikkodi
ನಮ್ಮ ಸಾಹುಕಾರ್ಗೆ ಅನ್ಯಾಯ ಮಾಡಲಾಗಿದ್ದು, ಸಿಡಿ ಪ್ರಕರಣದ ಕುರಿತು ಸೂಕ್ತ ತನಿಖೆ ಮಾಡಲೇಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಾಕಾರರು
ಓದಿ:ಇನ್ನೂ ಟೆಂಡರ್ ಆಗಿಲ್ಲ, ಭ್ರಷ್ಟಾಚಾರ ಹೇಗೆ ಸಾಧ್ಯ? : ಸಚಿವ ಸುಧಾಕರ್
ಬೆಳಗಾವಿ ನಗರ, ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ, ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಸಿಡಿ ಬಹಿರಂಗ ಪ್ರಕರಣದ ಸೂಕ್ತ ತನಿಖೆಗೆ ಆಗ್ರಹ ಮಾಡಲಾಗಿದೆ. ರಾಜಕೀಯ ಷಡ್ಯಂತ್ರ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಹಾಗೂ ರಮೇಶ್ ವಿರುದ್ಧ ದೂರು ನೀಡಿದ್ದ ದಿನೇಶ್ ಕಲ್ಲಹಳ್ಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.