ಕರ್ನಾಟಕ

karnataka

ETV Bharat / state

ಬೆಳಗಾವಿ ಬೇಗುದಿ ಬಗ್ಗೆ ಅಮಿತ್ ಶಾ ಜೊತೆ ಚರ್ಚೆ ಮಾಡಿದ ರಮೇಶ್ ಜಾರಕಿಹೊಳಿ - ಈಟಿವಿ ಭಾರತ ಕನ್ನಡ

ಕೇಂದ್ರ ಸಚಿವ ಅಮಿತ್​ ಶಾರನ್ನು ಮಾಜಿ ಸಚಿವ ರಮೇಶ್​​ ಜಾರಕಿಹೊಳಿ ಭೇಟಿಯಾಗಿದ್ದು, ಬೆಳಗಾವಿ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಅಮಿತ್​ ಶಾ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ
ಅಮಿತ್​ ಶಾ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

By

Published : Mar 18, 2023, 6:26 PM IST

ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ರಾಜಕಾರಣದಲ್ಲಿ ಪ್ರತಿಯೊಂದು ದಿನವೂ ಹೊಸ ತಿರುವ ಪಡೆದುಕೊಂಡು ರಾಜ್ಯದ ಗಮನವನ್ನು ಸೆಳೆದಿದೆ. ಇದರ ನಡುವೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿಯಾಗಿರುವುದು ಜಿಲ್ಲೆಯಲ್ಲಿ ಕುತೂಹಲ ಮೂಡಿಸಿದೆ.

ಬೆಳಗಾವಿ ಬಿಜೆಪಿ ವಲಯದಲ್ಲಿ ಮೂರು ತಂಡಗಳಾಗಿದ್ದು, ನಾಯಕರಲ್ಲಿ ಪರಸ್ಪರ ಅಸಮಾಧಾನಕ್ಕೆ ಕಾರಣವಾಗಿದೆ. 18 ವಿಧಾನಸಭೆ ಕ್ಷೇತ್ರಗಳನ್ನು ಹೊಂದುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಹೊಂದಿರುವ ಜಿಲ್ಲೆ ಎಂಬ ಹಿನ್ನೆಲೆ ಸದ್ಯದ ರಾಜಕೀಯ ಬೆಳವಣಿಗೆಗಳು ಕುರಿತು ರಮೇಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಅಮಿತ್ ಶಾ ಜೊತೆ ಸಭೆ ನಡೆಸಿ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಮೇಶ್ ಜಾರಕಿಹೊಳಿ ಅವರ ಜೊತೆ ಆಪರೇಷನ್ ಕಮಲಕ್ಕೆ ಒಳಗಾದ ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಅವರಿಗೆ ಈ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್ ಕೈ ತಪ್ಪುವ ಭೀತಿಯ ಜೊತೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಬಿಜೆಪಿ ವಶಕ್ಕೆ ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಅವರಿಗೆ ಟಿಕೆಟ್ ನೀಡುವಂತೆ ಹಾಗೂ ನಿಪ್ಪಾಣಿ, ಹುಕ್ಕೇರಿ ಬೆಳಗಾವಿ ವಿವಿಧ ವಿಧಾನಸಭಾ ಕ್ಷೇತ್ರದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬೆಳಗಾವಿಯಲ್ಲಿನ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಕೇಂದ್ರ ಸಚಿವರ ಜೊತೆ ರಮೇಶ್ ಜಾರಕಿಹೊಳಿ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಬಿಜೆಪಿಯಲ್ಲಿನ ಭಿನ್ನಮತ ಸ್ಫೋಟಕ್ಕೆ ಕಳೆದ ಎರಡು ವರ್ಷದಲ್ಲಿ ಬಿಜೆಪಿ ಪಕ್ಷಕ್ಕೆ ನಷ್ಟ ಸಂಭವಿಸಿದೆ. ವಾಯುವ್ಯ ಶಿಕ್ಷಕರ ಮತಕ್ಷೇತ್ರ ಹಾಗೂ ವಿಧಾನಪರಿಷತ್ ಸದಸ್ಯ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪ್ರಮುಖ ಎರಡು ಸ್ಥಾನಗಳನ್ನು ಕಳೆದುಕೊಂಡಿದೆ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಯಾವ ರಣತಂತ್ರ ರೂಪಿಸುತ್ತಾರೆ ಎಂಬುದನ್ನು ಕೇಂದ್ರ ಸಚಿವರಿಗೆ ರಮೇಶ್ ಜಾರಕಿಹೊಳಿ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಮಹೇಶ ಕುಮಟಳ್ಳಿಗೆ ಟಿಕೆಟ್​ ನೀಡದಿದ್ದರೆ ಚುನಾವಣೆ ಸ್ಪರ್ಧೆ ಮಾಡಲ್ಲ: ಇನ್ನೂ ಕೆಲ ದಿನಗಳ ಹಿಂದೆ ವಿಜಯಪುರಕ್ಕೆ ತೆರಳಿದ್ದ ರಮೇಶ್​ ಜಾರಕಿಹೊಳಿ, ಮಹೇಶ ಕುಮಟಳ್ಳಿಗೆ ಚುನಾವಣೆಗೆ ಟಿಕೆಟ್ ಸಿಗದಿದ್ದೆರೆ ತಾವು ಗೋಕಾಕ್ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದರು. ಅಲ್ಲದೇ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿಯಲ್ಲಿ 13 ಸ್ಥಾನ ಬಿಜೆಪಿ ಗೆಲ್ಲಲಿದೆ. ಹೆಚ್ಚು ಗೊಲ್ಲೋಕೆ ಪ್ರಯತ್ನಿಸಲಾಗುತ್ತದೆ ಎಂದು ಹೇಳಿದ್ದರು.

ಸಿಡಿ ಬ್ಲಾಕ್​ಮೇಲ್​ ರಾಜಕಾರಣ:ಕಾಂಗ್ರೆಸ್ ಪಕ್ಷದಲ್ಲಿ ಕೆಲವರು ಬ್ಲಾಕ್‌ಮೇಲ್ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಯಾವುದೇ ಪರಿಸ್ಥಿತಿಯಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೇರಲು ನಾನು ಬಿಡುವುದಿಲ್ಲ ಎಂದು ಶಪಥವನ್ನು ಮಾಡಿರುವುದಾಗಿ ಗೋಕಾಕ್​ ಸಮಾವೇಶದಲ್ಲಿ ಹೇಳಿದ್ದರು. ಅಲ್ಲದೇ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿಯೂ ನುಡಿದಿದ್ದರು.

ಇದನ್ನೂ ಓದಿ:ಕೆಲವು ಕಾಂಗ್ರೆಸ್ ನಾಯಕರಿಂದ ಸಿಡಿ ಬ್ಲಾಕ್‌ಮೇಲ್ ರಾಜಕಾರಣ: ರಮೇಶ್ ಜಾರಕಿಹೊಳಿ

ABOUT THE AUTHOR

...view details