ಬೆಳಗಾವಿ :ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದು, ಡಿಕೆಶಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಗೋಕಾಕ್ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿರುವ ರಮೇಶ್ ಬೆಂಬಲಿಗರು, ನಿಲ್ದಾಣದ ಮುಂಭಾಗದಲ್ಲೇ ಪ್ರತಿಭಟಿಸುತ್ತಿದ್ದಾರೆ.
ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಪ್ರತಿಭಟನೆ ಓದಿ:'ಪ್ರತಿಭಟನೆಗಳು ತನಿಖೆ ಮೇಲೆ ಪರಿಣಾಮ ಬೀರಲ್ಲ, ಪೊಲೀಸರು ಕ್ರಮಬದ್ಧ ತನಿಖೆ ನಡೆಸಲಿದ್ದಾರೆ'
ಪೊಲೀಸರು ಮುಂಜಾಗ್ರತಾ ಕ್ರಮವಾಗಿ ರಮೇಶ್ ಬೆಂಬಲಿಗರನ್ನ ತಡೆದಿದ್ದಾರೆ. ಇದರಿಂದ ವಿಮಾನ ನಿಲ್ದಾಣದ ಪಕ್ಕದ ಮೈದಾನದಲ್ಲಿ ರಮೇಶ್ ಬೆಂಬಲಿಗರು ಜಮಾವಣೆಗೊಂಡಿದ್ದಾರೆ. ಈ ವೇಳೆ ಡಿ ಕೆ ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರು ಘೋಷಣೆ ಹಾಕುತ್ತಿದ್ದಾರೆ. ವಿಮಾನ ನಿಲ್ದಾಣದ ಸುತ್ತಲೂ ಪೊಲೀಸ್ ಸರ್ಪಗಾವಲು ಒದಗಿಸಲಾಗಿದೆ.