ಕರ್ನಾಟಕ

karnataka

ETV Bharat / state

ಅಥಣಿಯಲ್ಲಿ ಆರ್​ಎಸ್​ಎಸ್ ಹಿರಿಯ ಮುಖಂಡರನ್ನು ಭೇಟಿಯಾದ ರಮೇಶ್ ಜಾರಕಿಹೊಳಿ - former minister ramesh jarakiholi news

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಥಣಿ ಆರ್​ಎಸ್​ಎಸ್​ನ ಹಿರಿಯ ಮುಖಂಡರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Ramesh Jarakiholi talk with RSS leaders in Athani
ಆರ್​ಎಸ್​ಎಸ್ ಹಿರಿಯ ಮುಖಂಡರನ್ನು ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

By

Published : Jun 26, 2021, 11:54 AM IST

ಅಥಣಿ(ಬೆಳಗಾವಿ):ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್​ಎಸ್​ಎಸ್​​) ಹಿರಿಯ ಮುಖಂಡರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಉತ್ತರ ಕರ್ನಾಟಕದ ಪ್ರಾಂತದ ಆರ್​ಎಸ್​ಎಸ್​ ಹಿರಿಯ ಮುಖಂಡರಾದ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಅಥಣಿ ಪಟ್ಟಣದ ಅವರ ನಿವಾಸದಲ್ಲಿ ಮಾಜಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡಿ, ಸದ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಅರವಿಂದ್ ರಾವ್ ದೇಶಪಾಂಡೆ ನಿವಾಸದ ಬಳಿ ರಮೇಶ್​ ಜಾರಕಿಹೊಳಿ

ಸಾಮಾನ್ಯ ಜನರಂತೆ ರಮೇಶ್ ಜಾರಕಿಹೊಳಿ ಅವರು ಅಥಣಿಗೆ ಆಗಮಿಸಿ ಅರವಿಂದ್ ರಾವ್ ದೇಶಪಾಂಡೆ ಅವರನ್ನು ಭೇಟಿ ಮಾಡಿದ್ದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ಅವರ ಜೊತೆ ಚರ್ಚೆ ಮಾಡಿದ್ದಾರೆ ಎನ್ನಲಾಗ್ತಿದೆ. ಆದರೆ ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

ಇದನ್ನೂ ಓದಿ:ಸಾರಿಗೆ ನೌಕರರಿಗೆ ಬಿಗ್​ ಶಾಕ್​.. ವರ್ಷಪೂರ್ತಿ ಮುಷ್ಕರಕ್ಕೆ ಸರ್ಕಾರದ ಕೊಕ್ಕೆ

ABOUT THE AUTHOR

...view details