ಕರ್ನಾಟಕ

karnataka

ETV Bharat / state

ಕೇದಾರ, ಬದ್ರಿನಾಥಕ್ಕೆ ರಮೇಶ್ ಜಾರಕಿಹೊಳಿ ಭೇಟಿ: ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಕಸರತ್ತು

ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಜಾರಕಿಹೊಳಿ ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಇಂದು ಅಥವಾ ನಾಳೆ ಬೆಳಗಾವಿಗೆ ವಾಪಸಾಗುವ ಸಾಧ್ಯತೆ ಇದೆ.

ramesh-jarakiholi-visits-the-badrinath-and-kedarnath-temple
ಕೇದಾರನಾಥ, ಬದ್ರಿನಾಥ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

By

Published : Oct 13, 2021, 11:14 AM IST

ಬೆಳಗಾವಿ:ಮತ್ತೆ ಸಚಿವ ಸಂಪುಟ ಸೇರಲು ರಮೇಶ್ ಜಾರಕಿಹೊಳಿ ಶತಾಯಗತಾಯ ಕಸರತ್ತು ಆರಂಭಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ದೆಹಲಿ ಯಾತ್ರೆ ಕೈಗೊಂಡಿರುವ ಅವರು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ಈ ನಡುವೆ ಹಲವು ದೇವಾಲಯಗಳಿಗೂ ಭೇಟಿ ನೀಡುತ್ತಿದ್ದಾರೆ.

ಕೇದಾರನಾಥ, ಬದ್ರಿನಾಥ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ಈ ಸಂದರ್ಭದಲ್ಲಿ ಅವರು ಉತ್ತರಾಖಂಡಕ್ಕೆ ಭೇಟಿ ಕೊಟ್ಟಿದ್ದು ಐತಿಹಾಸಿಕ ಕೇದಾರನಾಥ, ಬದ್ರಿನಾಥ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ರಮೇಶ್ ಜಾರಕಿಹೊಳಿ‌ ಕೇದಾರನಾಥ, ಬದ್ರಿನಾಥನ ದರ್ಶನ ಪಡೆದಿದ್ದಾರೆ.

ಕೇದಾರನಾಥ, ಬದ್ರಿನಾಥ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ರಮೇಶ್ ಜಾರಕಿಹೊಳಿಗೆ ಪುತ್ರ ಅಮರನಾಥ ಜಾರಕಿಹೊಳಿ, ಅಳಿಯ ಅಂಬಿರಾವ್ ಪಾಟೀಲ್ ಸಾಥ್ ನೀಡಿದ್ದು, ಹೆಲಿಕಾಪ್ಟರ್ ಮೂಲಕ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ ಇಂದು ಸಂಜೆ ಅಥವಾ ನಾಳೆ ಬೆಳಗಾವಿಗೆ ಮರಳುವ ಸಾಧ್ಯತೆ ಇದೆ.


ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಜಾರಕಿಹೊಳಿ ಮನವಿ ಮಾಡಿದ್ದಾರೆ ಎನ್ನಲಾಗ್ತಿದೆ. ಜಿಪಂ, ತಾಪಂ‌ ಹಾಗೂ ವಿಧಾನ ಪರಿಷತ್ ಚುನಾವಣೆ ಹತ್ತಿರವಾಗುತ್ತಿದೆ. ಕ್ಷೇತ್ರದ ಜನರಿಗೆ ಮರಳಿ ಸಚಿವ ಸ್ಥಾನ ಸಿಗುತ್ತೆ ಎಂಬ ಮಾತು ಕೊಟ್ಟಿದ್ದೆ. ಹೀಗಾಗಿ ಸಚಿವ ಸ್ಥಾನ ನೀಡಿದ್ರೆ ಅನುಕೂಲವಾಗಲಿದೆ ಎಂದು ವರಿಷ್ಠರ ಬಳಿ ರಮೇಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕೇದಾರನಾಥ, ಬದ್ರಿನಾಥ ದೇವಾಲಯಕ್ಕೆ ರಮೇಶ್ ಜಾರಕಿಹೊಳಿ ಭೇಟಿ

ABOUT THE AUTHOR

...view details