ಬೆಳಗಾವಿ: ಗೋಕಾಕ ಕ್ಷೇತ್ರದಲ್ಲಿರುವ ಕಲುಷಿತ ರಾಜಕೀಯ ವ್ಯವಸ್ಥೆ ಹಾಗೂ ಸರ್ವಾಧಿಕಾರಿ ಧೋರಣೆ ವಿರುದ್ಧ ಕಳೆದ ಎರಡೂವರೆ ದಶಕಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಅದೂ ಮುಂದುವರೆಯಲಿದೆ ಎಂದು ಗೋಕಾಕ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಶೋಕ ಪೂಜಾರಿ ಅನರ್ಹ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ತೊಡೆತಟ್ಟಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್ನಲ್ಲಿ ಹಣ- ತೋಳ್ಬಲದ ರಾಜಕೀಯ ವ್ಯವಸ್ಥೆ ತಾಂಡವವಾಡುತ್ತಿದೆ. ಅದಕ್ಕಾಗಿ ನಿರಂತರ ಹೋರಾಟ ನಡೆಸುತ್ತಿದ್ದೇವೆ. ಜೆಡಿಎಸ್ ನಲ್ಲಿದ್ದ ನನ್ನನ್ನು ಬಿಜೆಪಿಗೆ ಕರೆತಂದು ಇಲ್ಲಿಂದ ಟಿಕೆಟ್ ಕೊಡಿಸಿದ್ದರು. ಆದರೆ, ಚುನಾವಣೆಯಲ್ಲಿ ಸೋತಿದ್ದು ನನ್ನ ವೈಫಲ್ಯ. ರಾಜಕೀಯ ಸಮೀಕರಣದಿಂದ ರಮೇಶ ಜಾರಕಿಹೊಳಿ ಬಿಜೆಪಿ ಸೇರ್ಪಡೆ ಆಗುವ ಸಾಧ್ಯತೆ ಇದೆ. ಅವರು ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಕೆಲಸ ಮಾಡಿದರೆ, ನಮ್ಮ ಬೆಂಬಲ ಇದೆ. ಅದರ ಬದಲು ಮತ್ತೆ ಕಲುಷಿತ ರಾಜಕಾರಣ ಮುಂದುವರೆಸಿದ್ರೆ ನಾವು ಸಹಿಸಲ್ಲ ಎಂದು ಗುಡುಗಿದರು.